ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು ಃ ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂಬರುವ ಸೆಪ್ಟೆಂಬರ್‍ವರೆಗೆ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ತಿಳಿಸಿದರು.

ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮಾರ್ಚ್ 12ರಂದು ನೀರು ಹರಿಯಬಿಟ್ಟಿದ್ದು, ಗುರುವಾರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ ಎಂದು ತಿಳಿಸಿದ ಅವರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಐಸಿಸಿ ಸಮಿತಿ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರಿಗೆ ಕನಿಷ್ಟ 2 ಟಿಎಂಸಿ ನೀರನ್ನು ನೀಡಲು ಮನವಿ ಮಾಡಿದಾಗ ಸಚಿವರು ಒಪ್ಪಿ 2.5 ಟಿಎಂಸಿ ನೀರು ಬಿಡಲು ಅನುಮತಿ ನೀಡಿ ನೀರನ್ನು ಹರಿಯಲು ಬಿಟ್ಟಿದ್ದಾರೆ. ಜಿಲ್ಲೆಗೆ ನೀರು ಹರಿಸಲು ಸಹಕರಿಸಿದ ಹಾಸನದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು.

ಪಾಲಿಕೆಯಿಂದ 3 ದಿನಕ್ಕೊಮ್ಮೆ ನಗರಕ್ಕೆ ನೀರು ಸರಬರಾಜು ಮಾಡಿ ಮಿತವಾಗಿ ಬಳಸಿದ್ದರಿಂದ ಈವರೆಗೂ ನೀರು ಸರಬರಾಜು ಮಾಡಲು ಸಾಧ್ಯವಾಯಿತು. ಮುಂದಿನ 8-10 ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ಮಾತ್ರ ಕೆರೆಯಲ್ಲಿ ನೀರು ಲಭ್ಯವಿತ್ತು. ಮುಂದಾಲೋಚನೆಯಿಂದ ಹೇಮಾವತಿ ನೀರು ತರಿಸದೇ ಹೋಗಿದ್ದರೆ ತುಮಕೂರು ಸೇರಿದಂತೆ ಶಿರಾ, ಕೊರಟಗೆರೆ, ಮಧುಗಿರಿ, ಪಟ್ಟಣಗಳ ನಾಗರಿಕರಿಗೆ ನೀರಿನ ಅಭಾವ ಉಂಟಾಗುತ್ತಿತ್ತು. ನಗರದ ನಾಗರಿಕರು ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು ಎಂದು ಮನವಿ ಮಾಡಿದರು.

ಮಧುಗಿರಿ ತಾಲೂಕಿನ ಸುಮಾರು 65 ರಿಂದ 70 ಕೆರೆ ಹಾಗೂ ಕೊರಟಗೆರೆ ಕ್ಷೇತ್ರದ 65 ಕೆರೆಗಳಿಗೆ ನೀರು ತುಂಬಿಸುವ ಬೆಳ್ಳಾವಿ-ಕೋರ ಏತ ನೀರಾವರಿ ಯೋಜನೆಯ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಸುಮಾರು 500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೆರೆ ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪೆÇಲೀಸ್ ವರಿμÁ್ಠಧಿಕಾರಿ ಅಶೋಕ್ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ. ಆಶ್ವೀಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೇಮಾವತಿ ಯೋಜನೆಯ ಮುಖ್ಯ ಇಂಜಿನಿಯರ್ ಫಣಿರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *