ತುಮಕೂರು : ತುಮಕೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಡಾ||ಅರುಂಧತಿ ಡಿ. ಅವರನ್ನು ನೇಮಿಸಲಾಗಿದೆ.
ನೇಮಕಾತಿ ಪತ್ರವನ್ನು ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರು ನೀಡಿದರು. ಡಾ||ಅರುಂಧತಿ.ಡಿ. ಅವರು ಪಾವಗಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯು ಆಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಉಪಸ್ಥಿತರಿದ್ದರು.