ನೊಣವಿನಕೆರೆ: ಕ್ಷುಲ್ಲಕ ಕಾರಣಕ್ಕೆ ಜಗಳ-ಕೊಲೆ- ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಿತೆ?

ತುಮಕೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನೊಣವಿನಕೆರೆ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ.
ಕಳೆದ ವಾರ ಒಂದೇ ದಿನ ಎಂಟು ಜನರ ಹತ್ಯೆ, ಆತ್ಮಹತ್ಯೆ, ಮರ್ಯಾದೆ ಹತ್ಯೆ ನಡೆದಿದ್ದು, ಈಗ ಮತ್ತೊಂದು ಕೊಲೆ ನಡೆದಿರುವುದು ಜಿಲ್ಲೆಯ ಜನರನ್ನು ಭಯಭೀತರಾಗಿದ್ದಾರೆ.

ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆ, ಅತ್ಯಾಚಾರ, ಪ್ರಕರಣಗಳು ಹೆಚ್ಚುತ್ತಿರುವುದು ಹಲವು ಅನುಮಾನಗಳು ಮೂಡ ತೊಡಗಿವೆ.

ಕಾನೂನು ಸುವ್ಯವಸ್ಥೆ ಕಾಪಾಡ ಬೇಕಾದ ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿರುವುದೇಕೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಕನ್ನುಘಟ್ಟ ಗ್ರಾಮದಲ್ಲಿ ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸ್ ಸಬ್ ಇನ್ಸ್‍ಫೆಕ್ಟರ್ ಅಭಿಷೇಕ್ ತಿಳಿಸಿದರು.

ಮೃತನನ್ನು 34 ವರ್ಷದ ವಸಂತ್‍ಕುಮಾರ್ ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಪಾತ್ರೆ ತೊಳೆಯುವ ನೀರು ಚರಂಡಿಗೆ ಹರಿಯುವ ವಿಚಾರವಾಗಿ ಶಿವಬಸವಯ್ಯ ಹಾಗೂ ಬಸವಲಿಂಗಯ್ಯ ಕುಟುಂಬದ ನಡುವೆ ಗಲಾಟೆ ನಡೆದಿತ್ತು. ಬಸವಲಿಂಗಯ್ಯ ಕುಟುಂಬದವರು ಶಿವಬಸವಯ್ಯ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭಿರವಾಗಿ ಗಾಯಗೊಂಡಿದ್ದ ಶಿವಬಸವಯ್ಯನ ಪುತ್ರ ವಸಂತ್‍ಕುಮಾರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಪ್ರಕರಣ ಸಂಬಂಧ ಬಸಲಿಂಗಯ್ಯ, ಕುಮಾರ್, ವಿಜಯ್ ಸೇರಿದಂತೆ 8 ಜನರ ವಿರುದ್ಧ ಕೇಸ್ ದಾಖಲಾಗಿದ್ದು, ನೊಣವಿನಕೆರೆ ಪೆÇಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಈ ಸಂಬಂಧ ಪಿಎಸ್‍ಐ ಮೈತ್ರಿನ್ಯೂಸ್‍ನೊಂದಿಗೆ ಮಾತನಾಡಿ ಜನರಿಗೆ ಸ್ಪಂದಿಸಿ ಕೆಲಸ ನಿರ್ವಹಿಸುತ್ತಿದ್ದು, ಈ ಘಟನೆಯ ಬಗ್ಗೆ ಸುಳಿವು ಸಿಕ್ಕಿದ್ದರೂ ಮುಂಜಾಗೃತೆ ವಹಿಸುತ್ತಿದ್ದೆವು, ಕೊಲೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸುತ್ತಿರುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *