ತುಮಕೂರು: ಬೆಂಗಳೂರಿನ ಅಕಾಡೆಮಿಕ್ ಇನ್‍ಸೈಟ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಪ್ರತಿವರ್ಷ ಕೊಡಮಾಡುವ ಇನ್‍ಸೈಟ್ಸ್ ಎಜುಕೇಷನ್ ಎಕ್ಸೆಲೆನ್ಸ್ ಪ್ರಶಸ್ತಿಗೆ 2023ನೇ ಸಾಲಿನಲ್ಲಿ “ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ” ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯಕ್ಕೆ ಪ್ರಶಸ್ತಿ ಲಭಿಸಿದೆ.
ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಪ್ಲೇಸ್‍ಮೆಂಟ್ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ ಅಶೋಕ್ ಮೆಹ್ತಾ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
ಪ್ರತಿ ವರ್ಷ ಮೂಲಸೌಕರ್ಯ, ಗುಣಮಟ್ಟ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಅಭಿವೃದ್ಧಿ ಮತ್ತು ಗುಣಮಟ್ಟ ನೋಡಿ ಇನ್‍ಸೈಟ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ತೀರ್ಪುಗಾರರ ಸಮಿತಿ ಆಯ್ಕೆ ಮಾಡಿ ಪ್ರಶಸ್ತಿಂiÀiನ್ನು ನೀಡಲಿದೆ. ಈ ಪ್ರಶಸ್ತಿಗೆ ದೇಶಾದ್ಯಂತ ಸುಮಾರು 300 ಕ್ಕೂ ಹೆಚ್ಚು ಶಾಲಾ ಮತ್ತು ಕಾಲೇಜುಗಳು ಅರ್ಜಿ ಸಲ್ಲಿಸಿದ್ದವು. ಅವುಗಳಲ್ಲಿ ಸುಮಾರು 70 ಕ್ಕೂ ಹೆಚ್ಚು ಶಾಲಾ ಮತ್ತು ಕಾಲೇಜುಗಳನ್ನು ಆಯ್ಕೆ ಮಾಡಲಾಗಿತ್ತು. ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ 2023ನೇ ಸಾಲಿನ ಪ್ರಶಸ್ತಿ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿಗೆ ಲಭಿಸಿದೆ.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನ ಬಳಸಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ವಿಶೇಷವಾಗಿ ಕೌಶಲ್ಯ ಅಭಿವೃದ್ಧಿಯಲ್ಲಿ ಸತತ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿದೆ ಎಂದು ಪ್ಲೇಸ್‍ಮೇಂಟ್ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಅಶೋಕ್ ಮೆಹ್ತಾ ತಿಳಿಸಿದ್ದಾರೆ.
ಪ್ರಶಸ್ತಿ ಲಭಿಸಿದಕ್ಕೆ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರು ಪ್ರಶಸ್ತಿ ಲಭಿಸಲು ಶ್ರಮಿಸಿದ್ದ ಡೀನ್‍ಗಳು, ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಆಸಕ್ತಿ ಅಧ್ಯಾಪಕರು ತೋರಿಸಬೇಕು. ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಸಂಶೋಧನಾ ವಿಷಯ ಮಂಡಿಸಬೇಕು. ಅವುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದಾಗ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ವಿಚಾರ ತಿಳಿಯಲು ಉತ್ಸಾಹ ವ್ಯಕ್ತಪಡಿಸುತ್ತಾರೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ ಲಿಂಗೇಗೌಡ, ರಿಜಿಸ್ಟ್ರಾರ್ ಎಂ.ಜೆಡ್ ಕುರಿಯನ್, ್ಲ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳ ಸಲಹೆಗಾರರಾದ ವಿವೇಕ್ ವೀರಯ್ಯ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್ ರವಿಪ್ರಕಾಶ ಅವರು ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.