ತುಮಕೂರು : ಸ್ವಾರ್ಥ ಕುಟುಂಬ ರಾಜಕಾರಣಕ್ಕೆ, ದೇವೇಗೌಡರು ತಮ್ಮ ಕುಟುಂಬದಲ್ಲಿಯೇ ಅಧಿಕಾರ ಉಳಿಯಬೇಕೆಂಬ ಕಾರಣ ಮಾಡಿಕೊಂಡು ಒಪ್ಪಂದವಾಗಿದೆ.ಮಗ, ಮೊಮ್ಮಗ, ಅಳಿಯನಿಗಾಗಿ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಸುತ್ತುತ್ತಿರುವುದನ್ನು ನೋಡಿದರೆ ನಿಜಕ್ಕೂ ನೋವಾಗುತ್ತದೆ. ಅಧಿಕಾರದ ಆಸೆಗೆ ಅವರ ಮಕ್ಕಳು, ಮೊಮ್ಮಕ್ಕಳು ಸಾಯುವ ಕಾಲದಲ್ಲಿಯೂ ಅವರಿಗೆ ನೆಮ್ಮದಿ ಕೊಡಲಿಲ್ಲವಲ್ಲ ಎಂದು ಅನುಕಂಪ ಮೂಡುತ್ತದೆ ಎಂದರು.
ನಗರದ ಟೌನ್‍ಹಾಲ್‍ನಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕಾಂಗ್ರೆಸ್‍ನ ಎಸ್.ಪಿ.ಮುದ್ದಹನುಮೇಗೌಡರ ನಾಮಪತ್ರ ಸಲ್ಲಿಸುವ ವೇಳೆ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವೇಗೌಡರು ತುಮಕೂರಿಗೆ ಬಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಮತ ಕೇಳುತ್ತಿಲ್ಲ. ಬದಲಿಗೆ ದೇವೇಗೌಡರನ್ನು ಸೋಲಿಸಿದವರನ್ನು ಸೋಲಿಸಿ ಎಂದು ಕರೆ ಕೊಡುತ್ತಿದ್ದಾರೆ. 2019ರ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ಇದೇ ಜಿ.ಎಸ್.ಬಸವರಾಜು ಮತ್ತು ವಿ.ಸೋಮಣ್ಣ, ದೇವೇಗೌಡರು ಕೇಳುತ್ತಿರುವುದು ಸಹ ಅವರನ್ನು ಸೋಲಿಸಿ ಎಂದು.ಹಾಗಾಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಕ್ರಿಯಾಶೀಲ ಸಂಸದರು ಎಂದು ಹೆಸರು ಪಡೆದಿದ್ದ ಮುದ್ದಹನುಮೇಗೌಡರು ಮತ್ತೊಮ್ಮೆ ಗೆಲುವು ಸಾಧಿಸುವಂತೆ ನಾವೆಲ್ಲರು ಮಾಡಬೇಕಾಗಿದೆ ಎಂದು ಕೆ.ಎನ್.ರಾಜಣ್ಣ ನುಡಿದರು.
ಎಸ್.ಪಿ.ಮುದ್ದಹನುಮೇಗೌಡರು ಹತ್ತು ವರ್ಷಗಳ ಕಾಲ ಡಿಸಿಸಿ ಅಧ್ಯಕ್ಷರಾಗಿ, ಮೂರು ಬಾರಿ ಶಾಸಕರಾಗಿ, ಸಂಸದರಾಗಿ ಕೆಲಸ ಮಾಡಿರುವ ಎಸ್.ಪಿ.ಮುದ್ದಹನುಮೇಗೌಡರು ಸರಳ ಸಜ್ಜನಿಕೆಗೆ ಹೆಸರಾದವರು.ಅವರನ್ನು ಈ ಬಾರಿ ಗೆಲ್ಲಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.
ಕಾರ್ಯದರ್ಶಿ ಮಯೂರ ಜಯಕುಮಾರ್, ಮಾಜಿ ಸಚಿವ ವೆಂಕಟರವಣಪ್ಪ, ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಹಲವರು ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅಶೋಕ ರಸ್ತೆ ಮೂಲಕ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.