ತುಮಕೂರು : ಮಾಜಿ ಸಚಿವ ದಿ.ಸಿ.ಚನ್ನಿಗಪ್ಪ ಅವರ ಪತ್ನಿ ಹಾಗೂ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಅವರ ತಾಯಿ ಸಿದ್ದಗಂಗಮ್ಮ ಅವರು ಶನಿವಾರ ಮಧ್ಯಾಹ್ನ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಗಂಗಮ್ಮ ಅವರು ಬೆಂಗಳೂರಿನ ಸಾಗರ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತ ಪಟ್ಟಿದ್ದಾರೆ.
ಮೃತರು ಮಾಜಿ ಶಾಸಕ ಡಿ ಸಿ ಗೌರೀಶಂಕರ್ ,ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ವೇಣುಗೋಪಾಲ್ ,ಮಕ್ಕಳು,ಮೊಮ್ಮಕ್ಕಳು,ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಭೈರನಾಯಕನಹಳ್ಳಿಯಲ್ಲಿ ಭಾನುವಾರ ಸಿದ್ದಗಂಗಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.