ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಷಪಿಅಹ್ಮದ್

ತುಮಕೂರು:ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಎಸ್.ಷಪಿ ಅಹಮದ್ ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಗೊಂಡರು.

2023ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ತಮ್ಮ ಅಳಿಯ ಡಾ.ಎಸ್.ರಫೀಕ್ ಅಹಮದ್ ಅವರಿಗೆ ಟಿಕೇಟ್ ನೀಡಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು,ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ಕರೆಯ ಮೇರೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ಸಹ ನೇಮಕಗೊಂಡು ಕಾರ್ಯನಿರ್ವಹಿಸಿದ್ದರು.

ಆದರೆ ಜೆಡಿಎಸ್ ಪಕ್ಷದಲ್ಲಿನ ಇತ್ತೀಚಿನ ಬೆಳೆವಣಿಗೆಯಿಂದ ಬೇಸತ್ತ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಅವರು, ಕಾಂಗ್ರೆಸ್ ಪಕ್ಷವನ್ನು ಸೇರುವ ಹಿಂಗಿತ ವ್ಯಕ್ತಪಡಿಸಿದ್ದರು. ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಂತ್ರಿಗಳಾದ ಮಧು ಬಂಗಾರಪ್ಪ,ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮಾಜಿ ಸಂಸದ ಚಂದ್ರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದು, ಪಕ್ಷದ ಬಾವುಟವನ್ನು ನೀಡುವ ಮೂಲಕ ಎಸ್.ಷಪಿ ಅಹಮದ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು.

Leave a Reply

Your email address will not be published. Required fields are marked *