ಪೆ.11 ಕಲ್ಪತರು ವೈದ್ಯೋತ್ಸವ

ತುಮಕೂರು : ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 30ನೇ ರಾಜ್ಯ ಮಟ್ಟದ ಸಮ್ಮೇಳನ ‘ಕಲ್ಪತರು ವೈದ್ಯೋತ್ಸವ-2023’ ಉದ್ಘಾಟನಾ ಸಮಾರಂಭ ಫೆಬ್ರವರಿ 11, 2023ರಂದು ಬೆಳಿಗ್ಗೆ 11.30ಕ್ಕೆ ಬಿ.ಹೆಚ್. ರಸ್ತೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ಹೆಚ್‍ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ: ಕೆ. ಸುಧಾಕರ್ ಅವರು ಸಾಧಕ ವೈದ್ಯರಿಗೆ ಪ್ರಶಸ್ತಿ ವಿತರಣೆ ಮಾಡುವರು.  ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣ ಸ್ವಾಮಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಉಪಸ್ಥಿತಿಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಶಾಸಕರಾದ ಡಾ: ಜಿ. ಪರಮೇಶ್ವರ್ ಅವರು ವೈದ್ಯಕೀಯ ಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡುವರು.  ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾದ ಡಾ: ಎ.ಎನ್. ದೇಸಾಯಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಸಚಿವರಾದ ಬಿ.ಸಿ.ನಾಗೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸುವರು.

Leave a Reply

Your email address will not be published. Required fields are marked *