ಬಡ ಜನರ ಆರೋಗ್ಯ ರಕ್ಷಣೆಗಾಗಿ ‘ನಮ್ಮ ಕ್ಲಿನಿಕ್’ ಆರಂಭ : ಜಿ.ಬಿ.ಜ್ಯೋತಿಗಣೇಶ್

ತುಮಕೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ್ ರವರು ನಗರ ಹಾಗೂ ಪಟ್ಟಣ ಪ್ರದೇಶದ ಬಡ ದುರ್ಬಲ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ‘ನಮ್ಮ ಕ್ಲಿನಿಕ್’ಗಳನ್ನು ರಾಜ್ಯದಾದ್ಯಂತ ಆರಂಭಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

 ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ  ನಗರದ ಮೇಳೆಕೋಟೆ ಮುಖ್ಯರಸ್ತೆ ಹಾಗೂ ಮರಳೂರು ದಿಣ್ಣೆ ಮುಖ್ಯ ರಸ್ತೆಯಲ್ಲಿ ಆಯೋಜಿಸಿದ್ದ ‘ನಮ್ಮ ಕ್ಲಿನಿಕ್’  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಠಿಯಿಂದ ಆರೋಗ್ಯ ಕ್ಷೇತ್ರಕ್ಕಾಗಿ ನೀಡುವ ಅನುದಾನವನ್ನು ಆರ್ಥಿಕ ವರ್ಷ 2021-22 ರಿಂದ 2025-26ನೇ ಸಾಲಿನವರೆಗೆ ಐದು ವರ್ಷಗಳ ಅವಧಿಗೆ ಹಂಚಿಕೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2022-23ನೇ ಸಾಲಿನ ಆಯವ್ಯಯದಲ್ಲಿ ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಗರ ಪ್ರದೇಶದ ವ್ಯಾಪ್ತಿಯಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಲು ಯೋಜನೆ ರೂಪಿಸಿ, ಮೊದಲ ಹಂತದಲ್ಲಿ 114 ಕ್ಲಿನಿಕ್‍ಗಳು ಏಕ ಕಾಲಕ್ಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಖ್ಯಮಂತ್ರಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿವಹಿಸಿ ಆರೋಗ್ಯ ವ್ಯವಸ್ಥೆಯ ಸುಧಾರಣೆಗಾಗಿ ಸಾಕಷ್ಟು ಅನುದಾನವನ್ನು ನೀಡಿದ್ದಾರೆ, ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ, ಇಂದ್ರಧನುμï ಲಸಿಕಾಕರಣ, ಕೋವಿಡ್ ಲಸಿಕಾಕರಣ, ಜೆಇ ಲಸಿಕಾಕರಣ ಸೇರಿದಂತೆ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರದ ಸಹಕಾರದಲ್ಲಿ ಜಾರಿ ಮಾಡಲಾಗಿದೆ. ನಮ್ಮ ಕ್ಲಿನಿಕ್ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದ್ದು, ಬಸವರಾಜ ಬೊಮ್ಮಾಯಿ ಅವರು ಸಾಮಾನ್ಯ ವ್ಯಕ್ತಿಯಾಗಿ ಚಿಂತನೆ ನಡೆಸಿದ್ದರಿಂದಲೇ ಇಂತಹ ಜನೊಪಯೋಗಿ ಯೋಜನೆ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು.

     ಮಹಾನಗರ ಪಾಲಿಕೆಯ ಮಹಾಪೌರಾದ ಪ್ರಭಾವತಿ ಸುದೀಶ್ ಮಾತನಾಡಿ ಸಾರ್ವಜನಿಕರು ನಮ್ಮ ಕ್ಲಿನಿಕ್‍ಗಳನ್ನು  ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್ ಡಿ.ಎನ್. ಮಾತನಾಡಿದರು, .

ಮಹಾನಗರ ಪಾಲಿಕೆಯ ಉಪ ಮಹಾಪೌರಾದ ನರಸಿಂಹಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಕೇಶವ ರಾಜ್ ಜಿ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *