
ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (LPG Price) 200 ರೂ.ಗಳ ಸಹಾಯಧನವನ್ನ ಕೇಂದ್ರ ಸರ್ಕಾರ ಘೋಷಿಸಿದೆ.
ಉಜ್ವಲ ಯೋಜನೆಯಡಿ ಬರುವ ಫಲಾನುಭವಿಗಳಿಗೆ ಈ ಸಹಾಯಧನವನ್ನ ನೀಡಲಾಗುವುದು. ಆಗಸ್ಟ್ ಒಂದರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಿದ್ದವು. ಆದ್ರೆ, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಅಂದ್ಹಾಗೆ, ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಎಲ್‍ಪಿಜಿ ಬೆಲೆಯನ್ನ ಬದಲಾಯಿಸುತ್ತವೆ.
ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‍ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಅಡುಗೆ ಅನಿಲದ ಸಬ್ಸಿಡಿಯ ಲಾಭ ಸಿಗಲಿದೆ ಎಂದು ಕೇಂದ್ರ ಸರ್ಕಾರ ಕಳೆದ ವರ್ಷವೇ ಸ್ಪಷ್ಟಪಡಿಸಿತ್ತು. ಅಡುಗೆ ಅನಿಲ ಸಿಲಿಂಡರ್ ಮೇಲೆ ಬೇರೆ ಯಾರಿಗೂ ಸಬ್ಸಿಡಿ ನೀಡುವುದಿಲ್ಲ. ಉಜ್ವಲ ಯೋಜನೆಯಡಿ ಸರ್ಕಾರ ಈಗಾಗಲೇ 200 ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಈಗ ಹೆಚ್ಚುವರಿಯಾಗಿ 200 ರೂಪಾಯಿ ನೀಡುತ್ತಿದೆ.
12 ಎಲ್‍ಪಿಜಿ ಸಿಲಿಂಡರ್‍ಗಳ ಮೇಲೆ ಸಬ್ಸಿಡಿ.
ಉಜ್ವಲ ಯೋಜನೆಯಡಿ ಫಲಾನುಭವಿಗಳು ಒಂದು ವರ್ಷದಲ್ಲಿ ಒಟ್ಟು 12 ಅಡುಗೆ ಅನಿಲ ಸಿಲಿಂಡರ್‍ಗಳ ಮೇಲೆ ಸಬ್ಸಿಡಿ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ 2016 ರಲ್ಲಿ ಪ್ರಾರಂಭವಾಯಿತು. ಇದರ ಅಡಿಯಲ್ಲಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (ಬಿಪಿಎಲ್) ಸರ್ಕಾರವು ಉಚಿತ ಅಡುಗೆ ಅನಿಲ ಸಂಪರ್ಕವನ್ನು ನೀಡುತ್ತದೆ.
ಸಬ್ಸಿಡಿ ಪಡೆಯಲು, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು LPG ಸಂಪರ್ಕದೊಂದಿಗೆ ಲಿಂಕ್ ಮಾಡಬೇಕು. ಸಬ್ಸಿಡಿಯನ್ನು ಪಡೆಯಲು, ನಿಮ್ಮ ಆಧಾರ್ ಅನ್ನು ಗ್ಯಾಸ್ ಸಂಪರ್ಕಕ್ಕೆ ಲಿಂಕ್ ಮಾಡಬೇಕು. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯವಿದೆ. ಮಾರ್ಚ್ 2023 ರವರೆಗಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಉಜ್ವಲ ಯೋಜನೆಯಡಿ ಸರ್ಕಾರವು 9 ಕೋಟಿಗೂ ಹೆಚ್ಚು ಉಚಿತ ಅಡುಗೆ ಅನಿಲ ಸಂಪರ್ಕಗಳನ್ನು ವಿತರಿಸಿದೆ.
ಪೆಟ್ರೋಲಿಯಂ ಕಂಪನಿಗಳು 14 ಕೆಜಿ ಗೃಹೋಪಯೋಗಿ ಮತ್ತು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‍ಗಳ ಬೆಲೆಯನ್ನು ಪ್ರತಿ ತಿಂಗಳ ಮೊದಲನೆಯ ದಿನ ನಿಗದಿಪಡಿಸುತ್ತವೆ.