ಗೋಣಿ ತುಮಕೂರಿನಲ್ಲಿ ಗೆದೆ ಕೆಂಪಮ್ಮ ಅದ್ದೂರಿ ಜಾತ್ರೆ

ತುರುವೇಕೆರೆ- ತಾಲ್ಲೂಕಿನ ಗೋಣಿ ತುಮಕೂರಿನಲ್ಲಿ ಗ್ರಾಮದೇವತೆಗಳಾದ ಶ್ರೀ ಗದ್ದೆ ಕೆಂಪಮ್ಮದೇವಿ ಮತ್ತು ಶ್ರೀ ಆದಿಶಕ್ತಿ ಅರಸಮ್ಮದೇವಿಯ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವೈಭವಯುತವಾಗಿ ನಡೆಯಿತು.
ಗೋಣಿ ತುಮಕೂರಿನಲ್ಲಿ ಕಳೆದ 9 ವರ್ಷದ ಹಿಂದೆ ಗ್ರಾಮ ದೇವತೆಗಳಾದ ಗದ್ದೆ ಕೆಂಪಮ್ಮದೇವಿ ಮತ್ತು ಆದಿಶಕ್ತಿ ಅರಸಮ್ಮದೇವಿ ಜಾತ್ರೆಯನ್ನು ನಡೆಸಲಾಗಿತ್ತು. ಈಗ 10 ವರ್ಷದ ನಂತರ ಜಾತ್ರೆ ಆಚರಿಸುತ್ತಿರುವುದು ಗ್ರಾಮಸ್ಥರಲ್ಲಿ ಎಲ್ಲಿಲ್ಲದ ಸಂತೋಷ ಸಂಭ್ರಮ, ಸಡಗರ ಮನೆ ಮಾಡಿತ್ತು.

ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವದ ಸಂಭ್ರಮದ ಪರಾಕಾಷ್ಠೆ ಮೇಳೈಸಿದ್ದು, ದೇವರಿಗೆ ತಂಬಿಟ್ಟಿನ ಆರತಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.

ಊರಿನ ಮಧ್ಯೆಭಾಗದಲ್ಲಿರುವ ದೇವರ ಗರ್ಭ ಗುಡಿಯಿಂದ ಕಳಸ ಮತ್ತು ಗೂಡೆಗಳೊಂದಿಗೆ ದೇವರನ್ನು ಅದ್ದೂರಿಯಾಗಿ ಊರಿನ ಹೆಬ್ಬಾಗಲಿನ ಮುಖೇನ ಅರಸಮ್ಮ ದೇವಾಲಯಕ್ಕೆ ವಿವಿಧ ವಾದ್ಯಗೋಷ್ಠಿಯೊಂದಿಗೆ ಕರೆದೊಯ್ಯಲಾಯಿತು.
ಅರಸಮ್ಮ ದೇವಾಲಯಕ್ಕೆ ತೆರಳಿ ಮೂರು ಸುತ್ತು ದೇವಾಲಯ ಪ್ರದಕ್ಷಿಣೆ ಹಾಕಿದ ನಂತರ ನೆರೆದಿದ್ದ ಊರಿನ ಗ್ರಾಮಸ್ಥರು, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

10 ವರ್ಷದ ಬಳಿಕ ಜಾತ್ರೆ ನಡೆದ ಗ್ರಾಮದೇವತೆ ಜಾತ್ರೆಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಆಚರಿಸಿ ಅಮ್ಮನವರಿಗೆ ಸಕಲ ಸೇವೆಯನ್ನು ಸಲ್ಲಿಸಿ ಪುನೀತರಾದರು.

ಕುರುಕ್ಷೇತ್ರ ನಾಟಕ :

ಜಾತ್ರೆಯ ಅಂಗವಾಗಿ ಶ್ರೀ ಬ್ರಹ್ಮಲಿಂಗೇಶ್ವರಸ್ವಾಮಿ ಕೃಪಾಪೆÇೀಷಿತ ನಾಟಕ ಮಂಡಳಿ ವತಿಯಿಂದ ಶ್ರೀ ಚನ್ನಬಸವೇಶ್ವರ ಡ್ರಾಮಾ ಸೀನ್ಸ್ ಭವ್ಯ ರಂಗ ಸಜ್ಜಿಕೆಯಲ್ಲಿ ಕುರುಕ್ಷೇತ್ರ ಅಥವಾ ಛಲದೋಳ್ ದುರ್ಯೋಧನ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಹಾ.ಮಾ. ಸಿ.ಎನ್. ನಿತೀಶ್‍ಕುಮಾರ್ ರವರ ಸಂಗೀತ ನಿರ್ದೇಶನದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ ಅರ್ಥಗರ್ಭಿತವಾಗಿ ಮೂಡಿ ಬಂದಿತು. ನಾಟಕದಲ್ಲಿ ಕಲಾವಿದರುಗಳು ಅಚ್ಚುಕಟ್ಟಾಗಿ ಅಭಿನಯಿಸಿದ ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ ಅವರು, ಪ್ರಸ್ತುತ ದಿನಗಳಲ್ಲಿ ಪೌರಾಣಿಕ ನಾಟಕಗಳು ನಶಿಸುತ್ತಿವೆ. ಪೌರಾಣಿಕ ನಾಟಕ ಕಲಾವಿದರಿಗೆ ಪೆÇ್ರೀತ್ಸಾಹದ ಅಗತ್ಯವಿದೆ. ನಾಟಕ ಕಲೆ ಗ್ರಾಮೀಣ ಭಾಗದಲ್ಲಿ ಮಾತ್ರ ಜೀವಂತವಾಗಿರುವುದನ್ನು ನೋಡಬಹುದಾಗಿದೆ ಎಂದರು.

ನಗರ ಪ್ರದೇಶಗಳಲ್ಲಿ ಪೌರಾಣಿಕ ನಾಟಕಗಳು ಕಣ್ಮರೆಯಾಗುತ್ತಿವೆ. ಇಂದಿನ ಟಿವಿ, ಮೊಬೈಲ್ ಗೀಳಿಗೆ ಯುವಸಮೂಹ ಬಿದ್ದು ಪುರಾತನ ಸಾಹಿತ್ಯ, ಕಲೆಗಳ ಬಗ್ಗೆ ಆಸಕ್ತಿಯೇ ಇಲ್ಲದಂತಾಗಿದೆ. ಆದ್ದರಿಂದ ಪೌರಾಣಿಕ ನಾಟಕಗಳ ಬಗ್ಗೆ ಇಂದಿನ ಯುವ ಸಮೂಹಕ್ಕೆ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ. ಜತೆಗೆ ಪೌರಾಣಿಕ ನಾಟಕಗಳಿಗೆ ಪೆÇೀತ್ಸಾಹಿಸುವ ಅಗತ್ಯವೂ ಇದೆ ಎಂದು ಹೇಳಿದರು.

Leave a Reply

Your email address will not be published. Required fields are marked *