ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆಯಬೇಕು-ನೂರುನ್ನೀಸ ಕರೆ

ತುಮಕೂರು : ಬೆರಳೆಣಿಕೆಯಷ್ಟು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿಯನ್ನು ಪಡೆದಿದ್ದು, ಉಳಿದೆಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿಯನ್ನು ಪಡೆದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನೇಹಜ್ಯೋತಿ ಮಹಿಳಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿಂದು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗಾಗಿ ಏರ್ಪಡಿಸಲಾಗಿದದ ಕಾನೂನು ಅರಿವು, ಇಲಾಖಾ ಸೌಲಭ್ಯಗಳು, ಸ್ವೀಪ್ ಅರಿವು ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜದ ಏಳಿಗೆಗಾಗಿ ಕಡ್ಡಾಯವಾಗಿ ಮತ ಚಲಾಯಿಸಬೇಕು. ಇದರಿಂದ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿ ಬಲಿಷ್ಠ ಪ್ರಜಾಪ್ರಭುತ್ವದ ರಾಷ್ಟ್ರ ನಿರ್ಮಾಣ ಮಾಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರು ªುತ್ತು ದಮನಿತ ಮಹಿಳೆಯರು ತಮ್ಮನ್ನು ಗುರುತಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಲಿಂಗತ್ವ ಅಲಿಸಂಖ್ಯಾತರಿಗಾಗಿ ರೂಪಿಸಿರುವ ಕಾನೂನು-ಕಾಯ್ದೆ ಹಾಗೂ ಸರ್ಕಾರಿ ನೌಕರಿಯಲ್ಲಿ ಶೇ.1ರಷ್ಟು ಮೀಸಲಾತಿ ಇರುವ ಬಗ್ಗೆ ಮಾಹಿತಿ ನೀಡಿದರಲ್ಲದೆ, ಅರ್ಹರು ಈ ಸೌಲಭ್ಯದ ಸದುಪಯೋಗ ಪಡೆದು ಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್. ಶ್ರೀಧರ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಭಾರತ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಪ್ರತಿಯೊಬ್ಬ ಪ್ರಜೆಯೂ ಮತದಾನದ ಹಕ್ಕನ್ನು ಹೊಂದಿದ್ದು, ಮತದಾರರು ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದರು.

ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅಶೋಕ್ ಮಾತನಾಡಿ, ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿಯನ್ನು ರಚಿಸಲಾಗಿದ್ದು, ಸ್ವೀಪ್ ಕಾರ್ಯಕ್ರಮದಡಿ ಮತದಾನ ಮಾಡುವ ಬಗ್ಗೆ ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯ ಮತದಾನದ ಬಗ್ಗೆ ಜನರಲ್ಲಿ ತಿಳುವಳಿಕೆ ನೀಡುವ ಮೂಲಕ ಮತದಾನ ಪ್ರಮಾಣವನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕೆಂದು ತಿಳಿಸಿದರು.

ಪಯಣ ಸಂಸ್ಥೆ ನಿರ್ದೇಶಕ ಚಾಂದಿನಿ, ಸಾರಥ್ಯ ಒಕ್ಕೂಟದ ತ್ರಿಮೂರ್ತಿ ಅವರು ಮತದಾನ ಜಾಗೃತಿ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜಾನಾಧಿಕಾರಿ ಶಶಿಧರ್, ಮೇಲ್ವಿಚಾರಕಿ ಮೋಹನ್ ಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಜಾಹ್ನವಿ ಎಸ್, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ದಮನಿತ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

Leave a Reply

Your email address will not be published. Required fields are marked *