ತುಮಕೂರು : ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮ ಚಲೋ ಅಭಿಯಾನದ ರಾಜ್ಯ ಸಂಚಾಲಕರಾದ ವಿನಯ್ ಬಿದರೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.
ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರವಿಶಂಕರ್ ಹೆಬ್ಬಾಕ, ಹಿಂದುಳಿದ ವರ್ಗಗಳ ಸಂಚಾಲಕ ಸಂದೀಒಗೌಡ, ರೈತ ಮೋರ್ಚಾದ ಬ್ಯಾಟರಂಗೇಗೌಡ, ವೈ.ಎಚ್.ಹುಚ್ಚಯ್ಯ, ರುದ್ರೇಶ್, ಮಾಧ್ಯಮ ಸಲಹೆಗಾರರಾದ ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.