ತುಮಕೂರು : ಶೋಷಿತ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ, ಲಂಬಾಣಿ ಸಮುದಾಯದ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನುದಾನ ಒದಗಿಸಲು ಬದ್ಧವಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
2016ರಲ್ಲಿ ಬಂಜಾರ ಭವನಕ್ಕೆ ಅಡಿಗಲ್ಲು ಹಾಕಲಾಗಿದ್ದು, ಸುಮಾರು 3.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕಾಮಗಾರಿ ಅನೇಕ ವರ್ಷಗಳಿಂದ ಮುಂದೂಡಲ್ಪಟ್ಟಿತ್ತು. ಇದೀಗ ಸಮುದಾಯ ಭವನ ನಿರ್ಮಾಣಗೊಂಡು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಲಂಬಾಣಿ ಸಮುದಾಯಕ್ಕೆ ಹೆಚ್ಚು ಉಪಯೋಗವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಶೋಷಿತ ಸಮುದಾಯಗಳನ್ನು ಕಾನೂನಿನ ಮೂಲಕ ಮೇಲಕ್ಕೆತ್ತುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು. ದೇಶದಲ್ಲಿ ಜಾತೀಯತೆ ಇಲ್ಲದಿದ್ದರೆ ಭಾರತ ಇನ್ನಷ್ಟು ಪ್ರಗತಿ ಸಾಧಿಸಬಹುದಿತ್ತು ಎಂದು ಅಭಿಪ್ರಾಯಪಟ್ಟ ಅವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದ್ವನಿ ಇಲ್ಲದವರಿಗೆ ದ್ವನಿ ನೀಡುವಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಸರ್ಕಾರದ ಗ್ಯಾರೆಂಟಿ ಯೋಜನೆಗಳು ಹಳ್ಳಿಗಳಲ್ಲಿ ಕೂಲಿ ಕೆಲಸ ಮಾಡುವ ಮಹಿಳೆಯರಿಗೆ ಸಹಾಯವಾಗುತ್ತಿದ್ದು, ಹಲವರು ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಜೀವನೋಪಾಯಕ್ಕೆ ನೆರವಾಗುವಂತಹ ಉಪಯುಕ್ತ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಗ್ಯಾರೆಂಟಿ ಯೋಜನೆಗಳ ಜಾರಿಯ ನಡುವೆಯೂ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಲ್ಲದೆ ಮುಂದುವರಿಯುತ್ತಿವೆ, ಜಿಲ್ಲೆಯಲ್ಲಿ ಬಂಜಾರ ಸಮುದಾಯ ಹಾಗೂ ಗೊಲ್ಲರಹಟ್ಟಿಗಳನ್ನು ಒಳಗೊಂಡಂತೆ ಒಟ್ಟು 90 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಸರ್ಕಾರ ಘೋಷಿಸಿ ಅವರಿಗೆ ಮೂಲ ಸೌಕರ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮಾತನಾಡಿ, ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಜಾತಿ ಮತ್ತು ಧರ್ಮ ಆಧಾರಿತ ವ್ಯವಸ್ಥೆಗಳ ವಿರುದ್ಧ ಶೋಷಿತ ಸಮುದಾಯದವರು ಜೀವನಪೂರ್ತಿ ಹೋರಾಟ ನಡೆಸುತ್ತಾ ಬಂದಿದ್ದಾರೆ.

ಶೋಷಣೆಗೆ ಒಳಗಾಗಿರುವ ಸಮುದಾಯದವರಿಗೆ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ
ಕಳೆದ ಎರಡು ವರ್ಷಗಳಿಂದ ಅನೇಕ ಜನಪರ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ.
ಅಸಮಾನತೆಯನ್ನು ದೂರ ಮಾಡಿ ಸಮ ಸಮಾಜದ ನಿರ್ಮಾಣದ ಮೂಲಕ ಅಭಿವೃದ್ಧಿಯ ಹಾದಿಯಲ್ಲಿ ಸಾಗುವುದೇ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ರಾಜ್ಯಾದ್ಯಂತ 3,388 ಲಂಬಾಣಿ ತಾಂಡಗಳಿದ್ದು, ಇವುಗಳಲ್ಲಿ ಯಾವುದೇ ತಾಂಡಗಳು ಕಂದಾಯ ಗ್ರಾಮಗಳಾಗಿರಲಿಲ್ಲ. 2013 ಹಾಗೂ 2018ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದಕ್ಕೆ ಅನುಮೋದನೆ ನೀಡಿ ಆದೇಶ ಜಾರಿಗೊಳಿಸಲಾಗಿದೆ. ಇದರ ಮೂಲ ಉದ್ದೇಶ ಲಂಬಾಣಿ ಸಮುದಾಯಗಳಿಗೆ ಆಹಾರ, ಆರೋಗ್ಯ, ವಸತಿ, ಕೌಶಲ್ಯ ತರಬೇತಿ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಸುಲಭವಾಗಿ ಒದಗಿಸುವುದಾಗಿದೆ.
ಲಂಬಾಣಿ ಸಮುದಾಯದ 10 ಸಾವಿರ ಯುವಕ–ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಸ್ವತಂತ್ರವಾಗಿ ಜೀವನ ನಡೆಸಲು ನೆರವಾಗುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪ್ರಾಥಮಿಕ ಶಿಕ್ಷಣ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ರೆಸಿಡೆನ್ಷಿಯಲ್ ಶಾಲೆಯ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ ನೀಡಲಾಗಿದೆ. ಜೊತೆಗೆ 500ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕಾಗಿ ಮತ್ತಷ್ಟು 50 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವ ನಾಯ್ಕ ಮಾತನಾಡಿ, ರಾಜ್ಯದಲ್ಲಿ ಒಟ್ಟು 3,388 ತಾಂಡಾಗಳಿದ್ದು, ಶೋಷಿತ ಸಮುದಾಯದವರನ್ನು ಸಮಾಜದ ಮುಂಚೂಣಿಗೆ ತರಲು ಈ ರೀತಿಯ ಸಮುದಾಯ ಭವನಗಳನ್ನು ಸ್ಥಾಪಿಸಲಾಗುತ್ತಿದೆ.
ತಾಂಡಾಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ಮತ್ತಷ್ಟು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಂಜಾರ ಗುರುಪೀಠ, ಪರಮಪೂಜ್ಯ ಸರ್ದಾರ್ ಸೇವಾಲಾಲ್ ಮಹಾಸ್ವಾಮಿಗಳು, ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ರುದ್ರಪ್ಪ ಮಾನಪ್ಪ ಲಮಾಣಿ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಗ್ಯಾರಂಟಿ ಯೋಜನಾ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ ಗೌಡ ಸೇರಿದಂತೆ ಮತ್ತಿತರ ಸಮುದಾಯ ಮುಖಂಡರು ಉಪಸ್ಥಿತರಿದ್ದರು.