ಗುಬ್ಬಿ : ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್.ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ ಅವರುಗಳು ಬೆಂಗಳೂರಿನಲ್ಲಿ ಜೆಡಿಎಸ್‍ನ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದರು.
ಇವರ ಜೊತೆಗೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರಾದ ನರಸಿಂಹಯ್ಯ ಸಹ ಇದ್ದರು.
ಬೆಟ್ಟಸ್ವಾಮಿ ಮತ್ತು ಹೊನ್ನಗಿರಿಗೌಡ ಅವರು ಇಬ್ಬರೂ ಬಿಜೆಪಿ ಮತ್ತು ಕಾಂಗ್ರಸ್ ಪಕ್ಷವನ್ನು ಗುಬ್ಬಿ ಕ್ಷೇತ್ರದಲ್ಲಿ ಕಟ್ಟಿ ಬೆಳಸುವಲ್ಲಿ ಪ್ರಮುಖ ನಾಯಕರಾಗಿದ್ದು, ಈ ಬಾರಿ ಇಬ್ಬರೂ ಟಿಕೆಟ್ ಅಕಾಂಕ್ಷಿಗಾಳಗಿದ್ದರೂ, ಕಾಂಗ್ರೆಸ್ ಮತ್ತು ಬಿಜೆಪಿ ಇವರನ್ನು ತುಂಬಾ ಹೀನಾಯವಾಗಿ ನಡೆಸಿಕೊಂಡಿದ್ದಲ್ಲದೆ, ಇವರು ಪಕ್ಷ ಕಟ್ಟಿದ ನಾಯಕರು ಎಂಬುದನ್ನೂ ಸಹ ಲೆಕ್ಕಕ್ಕೆ ಇಟ್ಟುಕೊಳ್ಳದೆ ಇವರನ್ನು ಕಡೆಗಣಿಸಿ, ಬೇರೆಯವರಿಗೆ ಟಿಕೆಟ್ ನೀಡಲಾಯಿತು.
ಈ ಎರಡೂ ಪಕ್ಷಗಳು ಸೌಜನ್ಯಕ್ಕಾದರೂ ಈ ಇಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲಲ್ಲ, ಇದರಿಂದ ನೊಂದ ಇವರು ಜೆಡಿಎಸ್ ಪಕ್ಷವನ್ನು ಯಾವುದೇ ಷರತ್ತುಗಳಿದೆ ಸೇರ್ಪಡೆಗೊಳ್ಳಲು ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.
ಕುಮಾರಸ್ವಾಮಿಯವರು ಇವರನ್ನು ಇಂದು ಮಧ್ಯಾಹ್ನ ಗುಬ್ಬಿಯಲ್ಲಿ ನಡೆಯುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ಇಬ್ಬರೂ ಜೆಡಿಎಸ್‍ಗೆ ಬರುತ್ತಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎನ್ನಲಾಗಿದೆ.
ಇದರಿಂದ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತಷ್ಟು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.