ನವದೆಹಲಿ ಅಕ್ಟೋಬರ್ 14: ಭಾರತೀಯ ಚುನಾವಣಾ ಆಯೋಗ ಇಂದು (ಅಕ್ಟೋಬರ್ 14) ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಗುಜರಾತ್ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಗೊಳಿಸಿದೆ. ನವೆಂಬರ್ 12ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.
ಗುಜರಾತ್ ಅಸೆಂಬ್ಲಿಯ ಅವಧಿಯು ಮುಂದಿನ ವರ್ಷ ಫೆಬ್ರವರಿ 18 ರಂದು ಕೊನೆಗೊಳ್ಳುತ್ತದೆ. ಹಿಮಾಚಲ ಪ್ರದೇಶದ ಅವಧಿಯು ಜನವರಿ 8, 2023 ರಂದು ಕೊನೆಗೊಳ್ಳುತ್ತದೆ. ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಚುನಾವಣಾ ಸಂಸ್ಥೆಯು ಇತ್ತೀಚೆಗೆ ಎರಡು ರಾಜ್ಯಗಳಿಗೆ ಭೇಟಿ ನೀಡಿತ್ತು. ಹಿಮಾಚಲ ಪ್ರದೇಶ 68 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದರೆ ಗುಜರಾತ್ 182 ಸ್ಥಾನಗಳನ್ನು ಹೊಂದಿದೆ.
ಬಿಜೆಪಿ ಭದ್ರಕೋಟೆಯಾದ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಲು ತೊಡೆ ತಟ್ಟಿ ನಿಂತಿದೆ. ಇದಕ್ಕೆ ಬೇಕಾದ ತಯಾರಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ (ಎಎಪಿ) ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರನ್ನು ಸೆಳೆಯುತ್ತಿದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಗೆಲುವು ಸಾಧಿಸಿದರೆ ಮೂಲ ಸೌಕರ್ಯಗಳನ್ನು ಈಡೇರಿಸುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಇನ್ನೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಭೀತಿಯಿಂದ ಬಿಜೆಪಿ ಎಎಪಿ ಮೇಲೆ ದಾಳೀ ಮಾಡುತ್ತಿದೆ ಎನ್ನುವ ಆರೋಪಗಳಿವೆ. ಬಿಜೆಪಿ ಸತ್ಯೇಂದ್ರ ಜೈನ್ ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದೆ ಎಂದು ಎಎಪಿ ಆರೋಪ ಮಾಡಿದೆ. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಂಪುಟ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನವನ್ನು ಅನ್ಯಾಯ ಎಂದು ಹೇಳಿದ್ದಾರೆ. ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಿಂದ ಬಿಜೆಪಿಗೆ ಭಯವಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಎಎಪಿ ಸರಕಾರದ ಕ್ಯಾಬಿನೆಟ್ ಸಚಿವರನ್ನು ತಪ್ಪಾಗಿ ಸಿಲುಕಿಸಲಾಗುತ್ತಿದೆ. ಸತ್ಯಂತ್ ಜೈನ್ ವಿರುದ್ಧ ನಕಲಿ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಹೋರಿಸುವ ಮೂಲಕ ಬಿಜೆಪಿ ಹಿಮಾಚಲ ಚುನಾವಣಾ ತಯಾರಿಯಲ್ಲಿ ನಿರತವಾಗಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಕೂಡ ದೂರಿದ್ದಾರೆ. ಇದು ಮುಂಬರುವ ಹಿಮಾಚಲ ಪ್ರದೇಶದ ಚುನಾವಣೆಗೆ ಎರಡೂ ಪಕ್ಷಗಳ ಬಲಾಬಲ ಪ್ರದರ್ಶನದ ನಿರೀಕ್ಷೆಗಳನ್ನು ಹೆಚ್ಚಿಸಿದೆ.
ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ ನಂತರ :
ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ನಂತರ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ. ಗುಜರಾತ್ ಅಸೆಂಬ್ಲಿಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. 182 ಸ್ಥಾನಗಳ ಗುಜರಾತ್ ವಿಧಾನಸಭೆಯಲ್ಲಿ 111 ಬಿಜೆಪಿ ಮತ್ತು 62 ಕಾಂಗ್ರೆಸ್ ಶಾಸಕರಿದ್ದಾರೆ. ಚುನಾವಣಾ ಆಯೋಗ ಸ್ಪಷ್ಟನೆ 68 ಸದಸ್ಯರ ಹಿಮಾಚಲ ಪ್ರದೇಶ ವಿಧಾನಸಭೆಗೆ ಕಳೆದ ಬಾರಿ ನಡೆದ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ 44 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು 2017 ರಲ್ಲಿ ಕಾಂಗ್ರೆಸ್ ಕೇವಲ 21 ಸ್ಥಾನಗಳನ್ನು ಗಳಿಸಿತ್ತು. ಪ್ರಸ್ತುತ, ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 45 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 22 ಮತ್ತು ಸಿಪಿಎಂ 1 ಶಾಸಕರನ್ನು ಹೊಂದಿದೆ.