ಹೆಚ್‍ಎಎಲ್ ಸ್ಥಳಿಯರಿಗೆ ಉದ್ಯೋಗ-ಸಚಿವ ಡಾ: ಜಿ. ಪರಮೇಶ್ವರ

ತುಮಕೂರು.15: ಹೆಚ್‍ಎಎಲ್ ಕೈಗಾರಿಕೆಯಲ್ಲಿ ಸ್ಥಳಿಯ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಉದ್ಯೋಗ ವಿನಿಮಯ ಕಚೇರಿಯ ಮೂಲಕ ಮಾಹಿಯನ್ನು ತೆಗೆದು ಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೈಗಾರಿಕಾ ಸ್ಥಾಪಿಸಲು ಜಮೀನು ನೀಡಿರುವ ರೈತರ ಮಕ್ಕಳಿಗೂ ವಿದ್ಯಾರ್ಹತೆ ಆಧಾರದ ಮೇಲೆ ಉದ್ಯೋಗ ನೀಡುವಂತೆ ಹೆಚ್‍ಎಎಲ್ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ತಿಳಿಸಿದರು.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರ ಜೊತೆ ಮಾತನಾಡುತ್ತಿದ್ದರು.

ಹಲವು ವರ್ಷಗಳಿಂದ ನೋಡಿದ ಸ್ವಾತಂತ್ರ್ಯ ದಿನಾಚರಣೆಗಳಲ್ಲಿ ಇಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ತುಂಬಾ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ಜಿಲ್ಲಾಡಳಿತ ಆಯೋಜನೆ ಮಾಡಿದ್ದಾರೆ ಎಂದರು.

Home Minister Speech

ತುಮಕೂರು ನಗರಕ್ಕೆ ತನ್ನದೇ ಆದ ಇತಿಹಾಸವಿದೆ ಅದನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ನಗರದ ಸ್ವತಂತ್ರ ಚೌಕದಲ್ಲಿ ಬ್ರಿಟಿμï ಅವರು ನಮ್ಮ ಸ್ವತಂತ್ರ ಯೋಧರ ಮೇಲೆ ಗುಂಡು ಹಾರಿಸಿದ ಸ್ಥಳವಾಗಿದೆ ಎಂದರು.

ಸ್ವಾತಂತ್ರ್ಯ ಬಂದ ನಂತರ ಸ್ವಾತಂತ್ರ್ಯಕ್ಕಾಗಿ ನಡೆದ ಹಲವು ಹೋರಾಟ ಮತ್ತು ಬಲಿದಾನಗಳನ್ನು ನಾವೆಲ್ಲರೂ ಸ್ಮರಿಸಿಕೊಳ್ಳುವುದರ ಜೊತೆಗೆ ಮುಂದಿನ ಪೀಳಿಗೆಯವರಿಗೂ ಇತಿಹಾಸವನ್ನು ತಿಳಿಸಬೇಕು ಎಂದರು.

 ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನು ಉಳಿಸಿಕೊಳ್ಳುವುದರ ಜೊತೆಗೆ ಪ್ರಜಾಪ್ರಭುತ್ವಕ್ಕೆ  ಹಾಗೂ ಸಂವಿಧಾನಕ್ಕೇ ಯಾವುದೇ ರೀತಿಯಲ್ಲಿ ದಕ್ಕೆ ಬರದ ಹಾಗೇ  ನೋಡಿಕೊಳ್ಳಬೇಕು. ಮುಂದಿನ ಪೀಳಿಗೆ ಶಾಂತಿಯಿಂದ ಜೀವನ ನಡೆಸುವ ಅವಕಾಶವನ್ನು ಸೃಷ್ಟಿ ಮಾಡಿಕೊಡಬೇಕಾಗಿದೆ ಎಂದರು.

ಸ್ವಾತಂತ್ರ್ಯ ದಿನಾಚರಣೆಯನ್ನು ತುಂಬಾ ವಿಜೃಂಭಣೆಯಿಂದ ಆಚರಿಸಲಾಗಿದೆ. ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಗೆ ನೀಡಿದ್ದ ಒಳ್ಳೆಯ ಅವಕಾಶವನ್ನು ಬಳಸಿಕೊಂಡು ಆ ಶಾಲೆಯ ಸಾವಿರಾರು ಮಕ್ಕಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡುವುದರ ಮೂಲಕ ಅವರಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಬೀಜವನ್ನು ಬಿತ್ತಿದ್ದೇವೆ. ಆ ಘಟನೆ ಅವರಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದರು.
ಸಾಮಾನ್ಯವಾಗಿ ಸರ್ಕಾರಿ ಶಾಲೆ ಎಂದ ತಕ್ಷಣ ಬೇರೆ ರೀತಿಯಲ್ಲಿ ಕಲ್ಪನೆ ಮಾಡಿಕೊಳ್ಳುವ ಕಾಲದಲ್ಲಿ ನಮ್ಮ ಎಂಪ್ರೆಸ್ ಶಾಲೆಯ 800 ವಿದ್ಯಾರ್ಥಿನಿಯರು ಒಟ್ಟಿಗೆ ಸೇರಿ ನೃತ್ಯ ಮಾಡಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 7ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಜಿಲ್ಲೆಗಳ ಸರ್ಕಾರ ಅಂಕಿ ಅಂಶಗಳನ್ನು ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದರು.

ಜನಪರ ಆಡಳಿತ :
77ನೇ ಸ್ವಾತಂತ್ರ್ಯೋತ್ಸವದ ಧ್ವಜರೋಹಣ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು, ನಮ್ಮ ಸಂವಿಧಾನದ ಮೂಲಾಧಾರವಾಗಿರುವ ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಗೃಹ ಸಚಿವರು ತಿಳಿಸಿದರು.


ದೇಶದ ರಕ್ಷಣೆಗೆ ಹಗಲಿರುಳು ದುಡಿಯುತ್ತಿರುವ ಸೈನಿಕರ ಸೇವೆಯನ್ನು ಸ್ಮರಿಸುತ್ತಾ, ಶಾಂತಿ-ಸಹನೆ, ಸಹಿಷ್ಣುತೆಯ ಮಹತ್ವವನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.


ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲಸೌಕರ್ಯಗಳು ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಸಹ ಅನೇಕ ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಯಾವ ದೇಶದ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಕೊನೆ ಎಂಬುದು ಇಲ್ಲ. ಅದಕ್ಕೆ ಇಂದಿನ ಭಾರತವೇ ಸಾಕ್ಷಿ ಎಂದು ತಿಳಿಸಿದರು.


ದೇಶ ತನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಈ ಹೊತ್ತಿನಲ್ಲಿ ರಾಜ್ಯ ಸರ್ಕಾರವು ಕಳೆದ ಎರಡು ತಿಂಗಳಿನಿಂದ ಜನಪರ ಆಡಳಿತವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿದ್ದು, ಚುನಾವಣಾ ಪೂರ್ವದ ಪ್ರಣಾಳಿಕೆಯ ಘೋಷಣೆಗಳನ್ನು ಹಂತ ಹಂತವಾಗಿ ಕರ್ನಾಟಕದ ಜನತೆಗೆ ಅನುಷ್ಠಾನಗೊಳಿಸುತ್ತಿರುವುದು ದೇಶದ ಇತಿಹಾಸದಲ್ಲಿಯೇ ಪ್ರಥಮ ಎನ್ನುವುದನ್ನು ಮರೆಯುವಂತಿಲ್ಲ ಎಂದು ತಿಳಿಸಿದರು.

ನಮ್ಮ ಸರ್ಕಾರ ಬಂದ ಕೂಡಲೇ ಜನತೆಗೆ ನೀಡಿದ್ದ ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಮೇಯರ್ ಪ್ರಭಾವತಿ ಸುಧೀಶ್ವರ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಪಾಲಿಕೆ ಆಯುಕ್ತೆ ಆಶ್ವಿಜ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *