ತುಮಕೂರು : ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ ಜೂನ್ 7ರಂದು ಬಿಡುಗಡೆಯಾಗಲಿರುವ “ಹಮಾರೆ ಬಾರಾಹ್” ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡುವುದನ್ನು ಕರ್ನಾಟಕ ಸಿನಿಮಾ(ರೆಗ್ಯೂಲೇಶನ್) ಆಕ್ಟ್-1964ರ ಸೆಕ್ಷನ್-15(1) ಮತ್ತು 15(5)ರಡಿಯಲ್ಲಿ ನಿಷೇಧಿಸಿದ್ದು, “ಹಮಾರೆ ಬಾರಾಹ್” ಎಂಬ ಟ್ರೈಲರ್ ಹಾಗೂ ಸಿನಿಮಾವನ್ನು ಜೂನ್ 5, 2024 ರಿಂದ ಅನ್ವಯವಾಗುವಂತೆ ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ/ ಸಾಮಾಜಿಕ ಜಾಲತಾಣ/ ಸಿನಿಮಾ ಮಂದಿರಗಳು/ಖಾಸಗಿ ಟಿವಿ ಚಾಲನ್‍ಗಳು/ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಿದ್ದು, “ಹಮಾರೆ ಬಾರಾಹ್” ಎಂಬ ಟ್ರೈಲರ್ ಹಾಗೂ ಸಿನಿಮಾವನ್ನು ಪ್ರಸಾರ ಮಾಡಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮನವಿ ಮಾಡಿದ್ದಾರೆ.