ತುಮಕೂರು:ಹೆಚ್.ಐ.ವಿ ಸೋಂಕು ಬಗ್ಗೆ ಸಾರ್ವಜನಿಕರು ಜಾಗೃತರಾಗುವುದರ ಮೂಲಕ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಮಂಜುನಾಥ್ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಸರ್ಕಾರಿ ಮತ್ತು ಖಾಸಗಿ ರಕ್ತನಿಧಿ ಕೇಂದ್ರಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ದಯಭವನ್, ಚಿರಜೀವನ ನೆಟ್‍ವರ್ಕ್, ಎನ್.ಜಿ.ಒ ತುಮಕೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ನಿರ್ಮೂಲನಾ ದಿನ-2022 ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು.
ಈ ವರ್ಷದ “ಸಮಾನಗೊಳಿಸು” ಘೋಷ ವಾಕ್ಯದೊಂದಿಗೆ ವಿಶ್ವ ಏಡ್ಸ್ ನಿರ್ಮೂಲನಾ ದಿನವನ್ನು ವಿಶ್ವದ್ಯಾದಂತ ಆಚರಿಸಲಾಗುತ್ತಿದೆ, ಇದು ಒಂದು ದಿನದ ಕಾರ್ಯಕ್ರಮವಾಗಿ ಉಳಿಯಬಾರದು, ಪ್ರತಿದಿನ ಸಾರ್ವಜನಿಕರಲ್ಲಿ ಅರಿವೂ ಮೂಡಿಸುವ ಕಾರ್ಯ ನಡೆಯಬೇಕು, ಇದಕ್ಕೆ ಎಲ್ಲರ ಸಹಕಾರ ಅಗತ್ಯ, .ಹೆಚ್.ಐ.ವಿ ಸೋಂಕು ಇದು ವೈರಸ್‍ನಿಂದ ಬರುವ ಖಾಯಿಲೆಯಾಗಿದ್ದು, ಸಾರ್ವಜನಿಕರಲ್ಲಿ ಹೆಚ್.ಐ.ವಿ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಮೂಡಿಸಲು ವಿಶ್ವದಾದ್ಯಂತ ಪ್ರತಿ ವರ್ಷ ಡಿಸೆಂಬರ್ 1ರಂದು “ವಿಶ್ವ ಏಡ್ಸ್ ದಿನ”ವಾಗಿ ಆಚರಿಸಲಾಗುತ್ತಿದೆ.
ದೇಹದ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿ, ಅರ್ಜಿತ ರೋಗ ಲಕ್ಷಣಗಳ ಕೂಟವನ್ನು ಉಂಟುಮಾಡುತ್ತದೆ. ಇದು ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷಿಸದೇ ಇರುವ ರಕ್ತ ಪಡೆಯುವುದು, ಸಂಸ್ಕರಿಸದ ಸೂಜಿ, ಸಿರಂಜ್ ಬಳಕೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ, ಸೋಂಕಿತ ವ್ಯಕ್ತಿಯಲ್ಲಿ ದೀಘರ್Àಕಾಲದವರೆಗೆ ಕೆಮ್ಮು, ಜ್ವರ, ಭೇದಿ, ನಿಶಕ್ತಿ, ಚರ್ಮದ ಸೋಂಕು, ತೂಕದಲ್ಲಿ ಇಳಿಕೆ, ಹಸಿವಾಗದಿರುವುದು ಇದರ ಲಕ್ಷಣಗಳಾಗಿದ್ದು, ಹೆಚ್.ಐ.ವಿ ವೈರಸ್ ಮನುಷ್ಯನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ಇದರಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಹಲವಾರು ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಲಕ್ಷಣಗಳ ಕೂಟವನ್ನು ಏಡ್ಸ್ ಎಂದು ಕರೆಯಲಾಗುತ್ತದೆ. ಹೆಚ್.ಐ.ವಿ. ಪರೀಕ್ಷೆಯನ್ನು ವ್ಯಕ್ತಿಯು ಸಮಗ್ರ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸಾ ಕೇಂದ್ರಗಳಲ್ಲಿ (ಐ.ಸಿ.ಟಿ.ಸಿ.) ಪರೀಕ್ಷಿಸಿಕೊಳ್ಳಬಹುದು. ಇದಲ್ಲದೆ ಜಿಲ್ಲೆಯಲ್ಲಿನ ಎಲ್ಲಾ 24*7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಐ.ಸಿ.ಟಿ.ಸಿ. ಪರೀಕ್ಷಾ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು, ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್.ಐ.ವಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 2030ರೊಳಗೆ ಹೆಚ್‍ಐವಿ ಸೋಂಕಿತ ಗರ್ಭಿಣಿಯಿಂದ ಮಗುವಿಗೆ ತಗಲುವ ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರಲು ನ್ಯಾಕೋ ಉದ್ದೇಶಿಸಿದೆ., ವ್ಯಕ್ತಿಗತ ಮತ್ತು ಸಮುದಾಯದಲ್ಲಿ ಈ ಸೋಂಕಿನಿಂದ ಉಂಟಾಗುತ್ತಿರುವ ಸಮಸ್ಯೆಗಳು ಮತ್ತು ಇದರ ಬಗ್ಗೆ ಜಾಗೃತಿ ಹೆಚ್ಚಿಸುವುದು ಹಾಗೂ ಹೆಚ್‍ಐವಿ ಸೋಂಕಿತರಾಗಿರುವರಿಗೆ ಬೆಂಬಲ ನೀಡುವುದು ಮತ್ತು ಅವರು ಅನುಭವಿಸುತ್ತಿರುವ ಕಳಂಕ ತಾರತಮ್ಯವನ್ನು ಕಡಿಮೆ ಮಾಡುವುದು ಹಾಗೂ ಹೆಚ್‍ಐವಿ ಏಡ್ಸ್ ನಿರ್ಮೂಲನೆಯತ್ತ ದೃಷ್ಟಿ ಬೀರಿ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳತ್ತ ಪ್ರತಿಯೊಬ್ಬರ ಗಮನ ಸೇಳೆಯುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಡಾ. ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಐಸಿಟಿಸಿ ಮೇಲ್ವಿಚಾರಕಿ ಮೋಹನಕುಮಾರಿ ಮಾತನಾಡಿ ಮಾತನಾಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಲ್ಲಿ ಏಡ್ಸ್ ಜನಜಾಗೃತಿ ಜಾಥಾಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಸಿಇಓ ಡಾ. ಕೆ. ವಿದ್ಯಾಕುಮಾರಿ ಅವರು, ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿರಂತರವಾಗಿ ಏಡ್ಸ್ ಬಗ್ಗೆ ಅರಿವು ಮೂಡಿಸುತ್ತಿರುವ 3 ಐಸಿಟಿಸಿ, 1 ಎ.ಆರ್.ಟಿ, ರಕ್ತನಿಧಿ ಕೇಂದ್ರವನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ವೀಣಾ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ: ಸನತ್‍ಕುಮಾರ್, ಡಾ. ಚಲುವೇಗೌಡ, ಐ.ಎಂ.ಎ ಕಾರ್ಯದರ್ಶಿ, ಚಂದ್ರಪ್ಪ, ಉಪನ್ಯಾಸಕರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು