ಬೇಡಿಕೆ ಈಡೇರದಿದ್ದರೆ ಗ್ರಾ.ಪಂ.ಸದಸ್ಯರಿಂದ ಬೆಳಗಾವಿ ಚಲೋ

ತುಮಕೂರು :ಗ್ರಾಮ ಪಂಚಾಯಿತಿ ಸದಸ್ಯರುಗಳ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಬದ್ಧವಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸರ್ಕಾರದ ಪರವಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಡಿಸೆಂಬರ್ 12ರಂದು ಹಮ್ಮಿಕೊಂಡಿದ್ದ ಅನಿರ್ಧಿಷ್ಠಾವಧಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದು, ಡಿಸೆಂಬರ್ 19ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದರೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಡಿಸೆಂಬರ್ 12ರಂದು ಬೆಂಗಳೂರಿನ ಪ್ರೀಡಂ ಫಾರ್ಕ್‍ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಗ್ರಾಮಪಂಚಾಯಿತಿಗಳು ಸಂವಿಧಾನದ ಆಶಯದಂತೆ ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯ ನಿರ್ವಹಿಸಿಲು ಬೇಕಾದ ವಾತವರಣ ನಿರ್ಮಾಣ, ಕೇರಳ ಮಾದರಿಯಲ್ಲಿ ಗೌರವಧನ ಹೆಚ್ಚಳ, ಗ್ರಾಮ ಪಂಚಾಯಿತಿ ಸದಸ್ಯರಿಗೆ ಆರೋಗ್ಯ ವಿಮೆ ಹಾಗೂ ಉಚಿತ ಬಸ್ ಪಾಸ್ ನೀಡಿಕೆ, ಕೋವಿಡ್ ಸಂದರ್ಭದಲ್ಲಿ ಮೃತರಾದ ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರ ಘೋಷಿಸಿದ್ದ 30 ಲಕ್ಷ ರೂ.ಗಳ ಪರಿಹಾರದ ಹಣವನ್ನು ಆಶ್ವಾಸನೆ ನಿಧಿ ಹೆಸರಿನಲ್ಲಿ ಗ್ರಾ.ಪಂ.ಗಳಿಂದ ಸಂಗ್ರಹಿಸದೇ ಸರ್ಕಾರವೇ ನೀಡುವಂತೆ ಸೇರಿದಂತೆ ಇತರೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿದರು.

G.P. Members Banglore chalo

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಛಲಪತಿ, ಖಜಾಂಚಿ ಶಶಿಕಲಾ ಅಂಬರೀಶ್ ಇತರ ಪದಾಧಿಕಾರಿಗಳು ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *