ತುಮಕೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನವರಿ 29, 2024 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ-ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರಾದ ಎ.ನಾರಾಯಣಸ್ವಾಮಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ, ಸಚಿವರುಗಳಾದ ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಡಾ: ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಎನ್.ಚೆಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ಸಂತೋಷ್ ಎಸ್. ಲಾಡ್, ಕೆ.ವೆಂಕಟೇಶ್, ಶಿವರಾಜ್ ಸಂಗಪ್ಪ ತಂಗಡಗಿ, ಬಿ.ನಾಗೇಂದ್ರ, ಕೆ.ಎನ್.ರಾಜಣ್ಣ, ಸುರೇಶ್ ಬಿ.ಎಸ್., ಲಕ್ಷ್ಮಿ ಆರ್.ಹೆಬ್ಬಾಳ್ಕರ್, ಮಂಕಾಳ ವೈದ್ಯ, ಮಧು ಬಂಗಾರಪ್ಪ, ಡಾ: ಎಂ.ಸಿ ಸುಧಾಕರ್, ನವದೆಹಲಿಯ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಅವರ ಘನ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅಧ್ಯಕ್ಷತೆ ವಹಿಸುವರು.
ಕಾಯಕ್ರಮದಲ್ಲಿ ಜಿಲ್ಲೆಯ ಸಂಸದರು, ಜಿಲ್ಲೆಯ ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು, ತುಮಕೂರು ಮಹಾಪೌರರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು.