ಸಿದ್ಧಾರ್ಥ ವೈದ್ಯಕೀಯ ಕಾಲೇಜು,ಬಹುಮಹಡಿ ಕಟ್ಟಗಳ ಉದ್ಘಾಟನೆ

ತುಮಕೂರು: ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಹೊರಹೋಗಿಗಳ ವಿಸ್ತರಣಾ ಘಟಕ ಮತ್ತು ಆಸ್ಪತ್ರೆಯ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ಬಹುಮಹಡಿ ಕಟ್ಟಡಗಳ ಉದ್ಘಾಟನಾ ಸಮಾರಂಭ ಮಂಗಳವಾರ ನೆರವೇರಲಿದೆ.

ನಗರದ ಅಗಳಕೋಟೆಯಲ್ಲಿರುವ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ(ಜುಲೈ 25ರಂದು ಬೆಳಗ್ಗೆ 10 ಗಂಟೆಗೆ) ಏರ್ಪಟ್ಟಿರುವ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿರುವ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ. ಗೃಹಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಆಕಾಡೆಮಿಯ ಉನ್ನತ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಹೇ ಉಪಕುಲಪತಿಗಳಾದ ಡಾ.ಕೆ.ಪಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ.ಎಂ.ಜೆಡ್. ಕುರಿಯನ್,ಪ್ರಾಂಶುಪಾಲರಾದ ಡಾ. ಎಂ ಬಿ ಸಾನಿಕೋಪ್, ಉಪ ಪ್ರಾಂಶುಪಾಲರಾದ ಡಾ. ಪ್ರಭಾಕರ್ ಜಿ.ಎನ್. ಮತ್ತು ಡಾ.ಮಂಜುನಾಥ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಎನ್. ಎಸ್ ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *