ವಿಶ್ವದ ಬೃಹತ್ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ : ನ್ಯಾ. ಬಿ.ಜಯಂತ್ ಕುಮಾರ್.

ತುಮಕೂರು : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಮತದಾನ ಮಾಡಲು ಅಗತ್ಯ ಸೌಲಭ್ಯ ಒದಗಿಸಿದ್ದು, ಅದರಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾದದ್ದು ಆ ಪ್ರಜೆಯ ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ ಎಂದು ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬಿ. ಜಯಂತ ಕುಮಾರ್ ತಿಳಿಸಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು 25-1-1950ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಇದರ ವಜ್ರ ಮಹೋತ್ಸವ ಅಂಗವಾಗಿ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ 25-1-2011 ರಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇಡೀ ವಿಶ್ವದಲ್ಲಿ ಮನ್ನಣೆ ಇದೆ. ಅದರಲ್ಲಿ ಪ್ರಮುಖವಾಗಿ ಭಾರತದ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಟ ಸಂವಿಧಾನವಾಗಿದೆ. ನಮ್ಮ ದೇಶದ ಭವಿಷ್ಯ ಯುವ ಜನತೆ ಕೈಯಲ್ಲಿ ಇದೆ. ಆದುದರಿಂದ ಯುವ ಜನತೆ ಚುನಾವಣೆಯಲ್ಲಿ ತಪ್ಪದೇ ಭಾಗವಹಿಸಿ ಮತದಾನ ಮಾಡಬೇಕು. ವೃದ್ಧರಿಗೆ ಮನೆಯಿಂದಲೇ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ. ಛಿಗಿIಉIಐ ಅಪ್ಲಿಕೇಶನ್ ಮೂಲಕ ಭ್ರμÁ್ಟಚಾರ, ಲಂಚಗಳ ಬಗ್ಗೆ ದೂರು ದಾಖಲೆ ಮಾಡಿದರೆ ಕೆಲವೇ ಕ್ಷಣಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಅವರು ಮಾತನಾಡಿದರು.
ಈ ಸಂದರ್ಭ ನೂತನವಾಗಿ ಸೇರ್ಪಡೆಗೊಂಡ ನೊಂದಾಯಿತ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾಡಳಿತ ವತಿಯಿಂದ ಬಹುಮಾನಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಪೆÇ್ರೀತ್ಸಾಹಿಸಲಾಯಿತು. ಉತ್ತಮ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ನೀಡಲಾಯಿತು.

Leave a Reply

Your email address will not be published. Required fields are marked *