ತುಮಕೂರು : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಜಯಂತ ಕುಮಾರ್ ಅವರು ತಿಳಿಸಿದ್ದಾರೆ.
ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿರುವ ಕುಡಿಯುವ ನೀರು, ಪ್ರಾಥಮಿಕ ಚಿಕಿತ್ಸಾ ಸಲಕರಣೆ ಮೊದಲಾದ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಭೇಟಿ ನೀಡಿದ ಪ್ರತಿಯೊಂದು ಅಂಗನವಾಡಿ ಕೇಂದ್ರಗಳ ಕುಂದು ಕೊರತೆಗಳನ್ನು ಆಲಿಸಲಾಗಿದೆ.
ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಜಯಂತ ಕುಮಾರ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನ್ಯಾ.ನೂರುನ್ನಿಸ ಅವರ ನೇತೃತ್ವದಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಒಳ ಮತ್ತು ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಶುದ್ಧ ಕುಡಿಯುವ ನೀರನ್ನು ಮಕ್ಕಳಿಗೆ ಪೂರೈಸುವಂತೆ, ಆರೋಗ್ಯಕರ ಆಟಿಕೆ ಸಾಮಾನುಗಳನ್ನು ಮಕ್ಕಳಿಗೆ ಒದಗಿಸಬೇಕು. ಮಕ್ಕಳಿಗೆ ಕೊಡುವ ಆಹಾರವನ್ನು ಪೋಲು ಮಾಡದೆ, ಶುಚಿ-ರುಚಿಯಾಗಿರುವಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಕೆಲವೊಂದು ಅಂಗನವಾಡಿ ಕಟ್ಟಡಗಳ ದುರಸ್ತಿ ಅವಶ್ಯಕತೆ ಇದ್ದು, ಇನ್ನಿತರ ಮೂಲಭೂತ ಸೌಕರ್ಯದ ಕೊರತೆಗಳನ್ನು ತ್ವರಿತವಾಗಿ ಸರಿಪಡಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.