ತುಮಕೂರು: ಪ್ರೌಢಶಾಲೆಯಲ್ಲಿನ ಮಕ್ಕಳಿಗೆ ಪೋಕ್ಸೊ ಕಾಯಿದೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಹತ್ವದಾಗಿದೆ ಎಂದು ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅಭಿಪ್ರಾಯಪಟ್ಟರು.
ನಗರದ ಸದಾಶಿವನಗರದಲ್ಲಿನ ಬೈರೇಶ್ವರ ಪ್ರೌಢಶಾಲೆಯಲ್ಲಿ ಅಹಿಂಸಾ ಇಂಟರ್‍ನ್ಯಾಶನಲ್‍ನ ಅಸೋಸಿಯೇಷನ್ ಮತ್ತು ಇಂಡಿಯಾ ಚಾರಿಟೇಬಲ್ ಟ್ರಸ್ಟ್‍ಗಳ ಸಂಯುಕ್ತ ಆಸ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಕ್ಸೊ ಕಾಯಿದೆ ಜಾಗೃತಿ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಸಾಮಾಜಿಕ ತಿಳಿವಳಿಕೆಯ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸಾ ಮೇಂ, ಡಾ ಇಂಡಿಯಾ ಚಾರಿಟೇಬಲ್ ಟ್ರಸ್ಟ್‍ನ ಸಹ ಸಂಸ್ಥಾಪಕ ಅಧ್ಯಕ್ಷ ಡಾ ಮೊಹಮ್ಮದ್ ಹುಸೇನ್ ಶರೀಫ್, ಭಾರತ ಸರ್ಕಾರ ಜಿಎಸ್‍ಟಿ ಮತ್ತು ಕಸ್ಟಮ್ಸ್‍ನ ನಿವೃತ್ತ ಆಯುಕ್ತರಾದ ಹರ್ಷ ವರ್ಧನ್ ಉಮ್ರೆ ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಬೈರೇಶ್ವರ ಪ್ರೌಢಶಾಲೆಯ 104 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಅಲ್ಲದೆ ಶಾಲೆಯ ಆವರಣದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು. ಸ್ವಾಭಿಮಾನ್ ಟ್ರಸ್ಟ್, ತವಾಜುನ್ ಫೌಂಡೇಶನ್ ಮತ್ತು ಮಲಿಕ್ ಇಂಟರ್‍ನ್ಯಾಶನಲ್ ಇಂಕ್ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದವು.