ಗುಬ್ಬಿ ಕ್ಷೇತ್ರದಿಂದ ನನ್ನ ಮಗನಿಗೆ ಟಿಕೆಟ್ ಕೇಳಿರುವುದು ನಿಜ-ವಿ.ಸೋಮಣ್ಣ

ತುಮಕೂರು:ಗುಬ್ಬಿ ಕ್ಷೇತ್ರದಿಂದ ನನ್ನ ಮಗ ಅರುಣ್ ಸೋಮಣ್ಣ ಅವರಿಗೆ ಟಿಕೇಟ್ ಕೇಳಿರುವುದು ನಿಜ.ಕೊಡುವುದು, ಬಿಡುವುದು ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ತಿಳಿಸಿದರು.

ನಗರದ ಶ್ರೀಸಿದ್ದಗಂಗಾ ಮಠಕ್ಕೆ ತಮ್ಮ ಪತ್ನಿ ಶೈಲಜಾ ಅವರೊಂದಿಗೆ ಇಂದು ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಪೀಠ್ಯಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿಗಳ ಅಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಟಿಕೇಟ್ ಕೊಡುವುದು, ಬಿಡುವುದು ನಮ್ಮ ಕೈಯಲ್ಲಿ ಇಲ್ಲ. ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದರು.

ನನ್ನ ಮಗನು ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು, ಪಕ್ಷಕ್ಕಾಗಿ ದುಡಿದಿದ್ದಾನೆ.ಅವನಿಗೆ ಟಿಕೇಟ್ ನೀಡಿದರೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾನೆ.ಪಕ್ಷ ಟಿಕೇಟ್ ನೀಡಿದರೆ ಸಂತೋಷ ಎಂದ ವಿ.ಸೋಮಣ್ಣ,ಡಬಲ್ ಇಂಜಿನ್ ಸರಕಾರಕ್ಕೆ ಈ ಚುನಾವಣೆ ಪ್ರಮುಖ ಘಟ್ಟ.ಎರಡು ಸರಕಾರಗಳು ಒಟ್ಟಿಗೆ ಕೆಲಸ ಮಾಡಿವೆ.ಹಾಗಾಗಿ ಗೆಲುವ ಅಭ್ಯರ್ಥಿಗಳ ಕಡೆಗೆ ಹೆಚ್ಚಿನ ಗಮನಹರಿಸಿವೆ.ನನ್ನನ್ನು ವರುಣಾ ಕ್ಷೇತ್ರಕ್ಕೆ ಹೋಗು ಎಂದು ಯಾರು ಇದುವರೆಗೂ ಕೇಳಿಲ್ಲ.ಇದೆಲ್ಲಾ ಮಾಧ್ಯಮಗಳ ಊಹಾಪೋಹ.ಒಂದೊಂದು ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಇಲ್ಲದ ನ್ಯೂಸ್ ತುಮಕೂರಿಗೆ ಬಂದು ಬಿಡುತ್ತೇ. ಅದೇನು ಎಂದು ಗೊತ್ತಿಲ್ಲ.ಒಂದು ಕುಟುಂಬಕ್ಕೆ ಇಬ್ಬರಿಗೆ ಟಿಕೇಟ್ ನೀಡುವುದು ಎಷ್ಟು ಸರಿ ಎನ್ನುವ ಚರ್ಚೆ ಪಕ್ಷದಲ್ಲಿ ನಡೆಯುತ್ತಿದೆ. ಹಾಗಾಗಿ ಬಿ.ಎಸ್.ವೈ ತಮ್ಮ ಸ್ಥಾನವನ್ನು ತಮ್ಮ ಮಗನಿಗೆ ಬಿಟ್ಟುಕೊಟ್ಟಿದ್ದಾರೆ.ಸುಮಾರು ಐದಾರು ಜನರು ಈ ರೀತಿಯ ಸ್ಥಿತಿ ಇದೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ.ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ವಿ.ಸೋಮಣ್ಣ ನುಡಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೂ ನನಗೂ ಅವಿನಾಭಾವ ಸಂಬಂಧ.ಹತ್ತಾರು ಸಾವಿರ ಮಕ್ಕಳಿಗೆ ಅನ್ನ.ಅಕ್ಷರ, ಆಶ್ರಯ ನೀಡುವ ಮೂಲಕ ನಡೆದಾಡುವ ದೇವರಾಗಿರುವ ಸಿದ್ದಗಂಗಾ ಶ್ರೀಗಳ ಹುಟ್ಟು ಹಬ್ಬವಾದ ಏಪ್ರಿಲ್ 01ರಂದು ನೀತಿ ಸಂಹಿತೆ ಕಾರಣ ಮತ್ತು ನನ್ನ ಕ್ಷೇತ್ರ ಗೋವಿಂದರಾಜ ನಗರದಲ್ಲಿಯೂ ಶ್ರೀಗಳ ಹುಟ್ಟು ಹಬ್ಬ ಕಾರ್ಯಕ್ರಮ ವಿದ್ದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದರು.

ಈ ವೇಳೆ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಹೆಬ್ಬಾಕ,ನಗರ ಮಂಡಳ ಅಧ್ಯಕ್ಷ ಹನುಮಂತರಾಜು, ಪಾಲಿಕೆ ಸದಸ್ಯರಾದ ಮಂಜುಳ ಆದರ್ಶ,ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *