ತುಮಕೂರು: ದೇಶದ ಪ್ರಜಾಪ್ರಭುತ್ವವು ವಿವಿಧ ರೀತಿಯಲ್ಲಿ ವ್ಯಾಖ್ಯಾನಕ್ಕೆ ಒಳಗಾಗುತ್ತಿರುವುದು ದುರದೃಷ್ಟಕರ. ಗಾಂಧಿ, ಅಂಬೇಡ್ಕರ್ ಅವರ ಕೊಡುಗೆಗಳನ್ನು ಬಯಸುವ ನಾಗರಿಕನಿಗೆ, ಅವರ ಆದರ್ಶ, ನಿಷ್ಠೆ, ತತ್ತ್ವಗಳನ್ನೂ ಪಾಲಿಸಬೇಕೆಂಬ ಕನಿಷ್ಠ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರೊ. ಆರ್. ಎಲ್. ಎಂ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನದಲ್ಲಿ ಮಾತನಡಿದರು.
ಭಾರತ ಸ್ವತಂತ್ರವಾದ ಸಂದರ್ಭದಲ್ಲಿ- ರಾಜಕೀಯವೆಂದರೆ ಪ್ರಜೆಗಳ ಸೇವೆ. ಅಭಿವೃದ್ಧಿಯೇತರ ಆಡಳಿತದಿಂದ ರಾಷ್ಟ್ರ ನಿರ್ಮಾಣ ಸಾಧ್ಯ. ದೇಶವನ್ನು ಮುನ್ನಡೆಸಲು ಸಂವಿಧಾನ, ಕಾನೂನಿನ ಅಗತ್ಯವಿದೆ. ಎಲ್ಲರೂ ಭಾರತವನ್ನು ಮರುನಿರ್ಮಿಸಲು ಶ್ರಮಿಸೋಣ ಎಂಬುದಾಗಿತ್ತು. ಈಗಿನ ಕಾಲಘಟ್ಟದ ಕಾನೂನು, ರಾಜಕಾರಣವನ್ನು ಮರು ವ್ಯಾಖ್ಯಾನಿಸಬೇಕಿದೆ ಎಂದರು.
ಮೈಸೂರು ವಿವಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಚ್. ಎಂ. ರಾಜಶೇಖರ್ ದಿಕ್ಸೂಚಿ ಭಾಷಣ ಮಾಡಿ, ರಾಜಕೀಯ ಭ್ರμÁ್ಟಚಾರದಿಂದ ಆಡಳಿತಾತ್ಮಕ ಭ್ರμÁ್ಟಚಾರ, ಜನರ ತೆರಿಗೆಯ ಹಣದ ದುರುಪಯೋಗ, ಧಾರ್ಮಿಕ, ಜಾತಿ ಮತ್ತು ಸಮುದಾಯಗಳ ಧ್ರುವೀಕರಣದಿಂದ ರಾಜಕೀಯ ಧ್ರುವೀಕರಣ, ಕುಟುಂಬ ಆಧಾರಿತ ರಾಜಕೀಯದಿಂದ ಸ್ವಾರ್ಥ. ಇದರಿಂದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಪೆಟ್ಟಾಗಿದೆ. ಸಂಯುಕ್ತ ರಾಜಕಾರಣ ಮತ್ತು ಪ್ರಜಾಪ್ರಭುತ್ವ ಸಂವಿಧಾನದ ಎರಡು ಮುಖಗಳಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರಜೆಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳು ಪ್ರಜೆಗಳ ನಿರೀಕ್ಷೆಗಳನ್ನು ನೆರವೇರಿಸಿರುವರೇ ಎಂಬ ಪ್ರಶ್ನೆ ಸದಾ ಕಾಡುತ್ತದೆ. ಅಭಿವೃದ್ಧಿ ಪೂರಕ ಆಡಳಿತದಿಂದ ಮಾತ್ರ ಪ್ರಜಾಪ್ರಭುತ್ವಕ್ಕೆ ಗೌರವ ಎಂದು ತಿಳಿಸಿದರು.
ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಭಾರತ ಸರ್ಕಾರದ ನಿವೃತ್ತ ಜಂಟಿ ಕಾರ್ಯದರ್ಶಿ ರವಿ ಜೋಶಿ, ಭಾರತದಲ್ಲಿ ರಾಷ್ಟ್ರೀಯತೆಯು ಧರ್ಮದ ಆಧಾರದಲ್ಲಿ ವಿಂಗಡಣೆಯಾಗಿದೆ. ರಾಷ್ಟ್ರ ಪರಿಕಲ್ಪನೆಯು ಧರ್ಮದ ಕಲ್ಪನೆಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಗಣಿಸದ ಧರ್ಮಶಾಸ್ತ್ರಗಳಿಂದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಪ್ರಜಾಪ್ರಭುತ್ವ ಧಾರ್ಮಿಕತೆಯ ನೆರಳಲ್ಲಿ ನಡೆಯಬಾರದು ಎಂದರು.
ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆ. ಸಿ. ಸೂರಿ ‘ರಾಷ್ಟ್ರ, ರಾಜ್ಯ ಮತ್ತು ಗುರುತು: ಭಾರತೀಯ ಪ್ರಜಾಪ್ರಭುತ್ವದ ಕೆಲವು ಕೇಂದ್ರೀಯ ಕಾಳಜಿಗಳ ಕುರಿತಾದ ಪ್ರತಿಫಲನಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಗೋಷ್ಠಿಯ ಅಧ್ಯಕ್ಷತೆಯನ್ನು ಕುವೆಂಪು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಸದಾನಂದ ಜೆ. ಎಸ್., ವಹಿಸಿದ್ದರು.
ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರತಿನಿಧಿಗಳು 400ಕ್ಕೂ ಹೆಚ್ಚು ಸಂಶೋಧನ ಪ್ರಬಂಧಗಳನ್ನು ಮಂಡಿಸಿದರು
.
ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಪ್ರೊ. ಜಯಪ್ರಕಾಶ್ ಮಾವಿನಕುಳಿ,, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿಯ ಅಧ್ಯಕ್ಷ ಡಾ. ಟಿ. ಜಿ. ನಾಗಭೂಷಣ, ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಬೆಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಪಿ. ಎಸ್. ಜಯರಾಮು, ಸಮ್ಮೇಳದ ಅಧ್ಯಕ್ಷ ಪ್ರೊ. ಬಸವರಾಜ ಜಿ., ಸಂಘಟನಾ ಕಾರ್ಯದರ್ಶಿಗಳಾದ ಡಾ. ನಾಗರಾಜು ಎಂ. ಎಸ್., ಡಾ. ಕೆ. ಸಿ. ಸುರೇಶ, ಕೋಶಾಧಿಕಾರಿ ಡಾ. ಮಂಜುನಾಥ್ ಆರ್. ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ರೂಪೇಶ್ ಕುಮಾರ್ ಎ. ನಿರೂಪಿಸಿದರು.