ಇಂದು ಜಗದೀಶ್ ಶೆಟ್ಟರ್ ರಾಜೀನಾಮೆ

ತುಮಕೂರು :ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು.

ತುಮಕೂರು : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಇಂದು ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಳಿಕ ನನ್ನ ಮುಂದಿನ ನಿಲುವು ಏನೆಂದು ಹೇಳುತ್ತೇನೆ” ಎಂದು ತಿಳಿಸಿದರು.

”ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡಿದ್ದು, ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲದಿದ್ದರೂ, ನನಗೆ ಟಿಕೆಟ್ ಸಿಕ್ಕಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದ್ದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಸೇರಿದಂತೆ 12 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

Leave a Reply

Your email address will not be published. Required fields are marked *