ತುಮಕೂರು : ಜನವರಿ 20 ಮತ್ತು 21ರಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆಶಯದಂತೆ ಕಾರ್ಯಕ್ರಮ ಏರ್ಪಡಿಸಿದ್ದು, ತುಮಕೂರಿನ ಶೆಟ್ಟಿ ಹಳ್ಳಿ ರಿಂಗ್ ರೋಡ್ ನ ಆರ್‍ಟಿಪಿ ಕನ್ವೆನ್ಶನ್ ಸೆಂಟರ್‍ನಲ್ಲಿ ಕಾರ್ಯಕಾರಿಣಿ ನಡೆಯಲಿದೆ ಎಂದರು.
ಅನೇಕ ವಿಷಯಗಳ ಚಿಂತನ ಮಂಥನ ನಡೆಯಲಿದೆ. 37 ರಾಜ್ಯಗಳ ಮಹಿಳಾ ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದ ರಾಷ್ಟ್ರೀಯ ಪ್ರಭಾರಿ ದುಷ್ಯಂತಕುಮಾರ್ ಗೌತಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಭಾಗವಹಿಸಲಿದ್ದಾರೆ. 20ರಂದು ಸಂಜೆ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ವಾಸಂತಿ ಶ್ರೀನಿವಾಸನ್ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನಡೆಯಲಿದೆ. ಸ್ಥಳೀಯ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ. 21ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋμï ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಮೊದಲ ದಿನ ಬೆಳಿಗ್ಗೆ ತುಮಕೂರಿನ ಟೌನ್‍ಹಾಲ್ ಸರ್ಕಲ್‍ನಿಂದ ತುಮಕೂರು ಸಿದ್ಧಗಂಗಾ ಮಠದ ಆವರಣಕ್ಕೆ ಬೈಕ್ ರ್ಯಾಲಿ ನಡೆಯಲಿದೆ. ಪರಿಸರ ಸ್ನೇಹಿ ಮತ್ತು ಸ್ಥಳೀಯ ಉಡುಗೆ ತೊಡುಗೆಗಳಿಗೆ, ಆಹಾರಕ್ಕೆ ಆದ್ಯತೆ ಕೊಡಲಾಗುತ್ತಿದೆ ಎಂದು ತಿಳಿಸಿದರು.
ವಿಜಯ ಸಂಕಲ್ಪ ಯಾತ್ರೆ: ಜನವರಿ 21ರಿಂದ 29ರವರೆಗೆ ವಿಜಯ ಸಂಕಲ್ಪಯಾತ್ರೆಯು ನಡೆಯಲಿದ್ದು, ಜನವರಿ 21ರಂದು ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ 1681 ಬೂತ್‍ಗಳಲ್ಲೂ ವಿಜಯಸಂಕಲ್ಪ ಅಭಿಯಾನ ನಡೆಸಲಾಗುವುದು, ಜನವರಿ 29ರ ಕೊನೆಯ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿ ಬೂತ್‍ನಲ್ಲೂ ಆಯೋಜಿಸಲಾಗುವುದು ಎಂದು ತಿಳಿಸಿದರು.