ತುಮಕೂರು : ಅಕ್ಟೋಬರ್ 8ರಂದು ಮಾಯಸಂದ್ರಕ್ಕೆ ಆಗಮಿಸಿದ ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಜೊತೆ ಉಚ್ಛಾಟಿತ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಹೆಜ್ಜೆ ಹಾಕಿದ್ದು ಕಾಂಗ್ರೆಸ್ ಪಕ್ಷವನ್ನು ಸೇರುವ ಸೂಚನೆಯನ್ನು ನೀಡಿದರು.
ಇವರ ಜೊತೆಗೆ ತುಮಕೂರು ನಗರ ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ ಸಹ ರಾಹುಲ್ ಗಾಂಧಿಯವರ ಜೊತೆ ಹೆಜ್ಜೆ ಹಾಕುವುದರ ಮೂಲಕ ಸಾಥ್ ನೀಡಿದರು.
ವಾಸುರವರು ಕಾಂಗ್ರೆಸ್‍ಗೆ ಸೇರ್ಪಡೆಯಾಗುವುದು ಖಚಿತ ಎಂಬುದನ್ನು ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆಯಲ್ಲಿ ಭಾಗವಹಿಸುವ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಗುಬ್ಬಿಯ ಕ್ಷೇತ್ರದಲ್ಲಿ ಸ್ಪರ್ಧಿಸುವುದನ್ನು ಈ ಮೂಲಕ ಸಂದೇಶವನ್ನು ಮುಟ್ಟಿಸಿದರು ಎನ್ನಲಾಗುತ್ತಿದೆ.
ಅವರೊಂದಿಗೆ ಹೆಜ್ಜೆ ಹಾಕುತ್ತಾ ಕೆಲಹೊತ್ತು ಸಮಾಲೋಚನೆ ನಡೆಸಿದರು. ಈ ಪಾದಯಾತ್ರೆಯಲ್ಲಿ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಬೆಮೆಲ್ ಕಾಂತರಾಜು ಭಾಗಿಯಾಗಿದ್ದರು.