ಕಾಯ ಜಿಲ್ಲಾ ರೇಷ್ಮೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಡಾ .ವೈ.ಕೆ.ಬಿ. ಹಿತೈಶಿಗಳ ಸಂಯುಕ್ತಾಶ್ರಯದಲ್ಲಿ ನಿವೃತ್ತ ರೇಷ್ಮೆ ಉಪ ನಿರ್ದೇಶಕ ರಾದ ಎಅ.ವೈ.ಕೆ.ಬಾಲಕೃಷ್ಣ ಪ್ಪರವರ ಪುಸ್ತಕ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭವನ್ನು ನಗರದ ಕೇಂದ್ರ ಗ್ರಂಥಾಲಯ ಅಡಿಟೋರಿಯಂನಲ್ಲಿ ಜುಲೈ14 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಸಮಾರಂಭವನ್ನು ಬೆಳಗಾವಿ ಜಿಲ್ಲೆ ಬೈಲೂರಿನ ನಿಷ್ಕಲ ಮಂಟಪದ ಶ್ರೀ ನಿಜಗುಣನಂದ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಪುಸ್ತಕವನ್ನು ಪುಸ್ತಕ ಬಿಡುಗಡೆ ಯನ್ನು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾಡುವರು, ಅಧ್ಯಕ್ಷತೆಯನ್ನು ಸಾಹಿತಿ ಡಾ. ಎಲ್. ಹನುಮಂತಯ್ಯ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪ್ರಗತಿಪರ ಚಿಂತಕ ಪ್ರೊ. ಕೆ. ದೊರೈರಾಜು, ಡಾ. ಓ. ನಾಗರಾಜ್, ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್, ಜಿಲ್ಲಾ ರೇಷ್ಮೆ ಬೆಳೆಗಾರರ ಕ್ಷೇಮಾ ಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎಸ್.ವಿ. ಸ್ವಾಮಿ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ರೈತ ಮುಖಂಡರಾದ ಅನುಸೂಯಮ್ಮ, ಲೇಖಕಿ ಬಾ.ಹ, ರಮಾಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ದಲಿತ ಮುಖಂಡ ನರಸೀಯಪ್ಪ, ಡಾ. ಬಸವರಾಜು, ಪ್ರೊ. ಡಾಮಿನಿಕ್, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ನವೀದ್ ಅಹಮದ್ ಖಾನ್ ಭಾಗವಹಿಸಲಿದ್ದಾರೆ