ಜುಲೈ 28 : ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ- ಆರೋಗ್ಯ ವಿಮೆ ಕಾರ್ಡ್ ವಿತರಣೆ

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ “ಡಾ. ಜಿ. ಪರಮೇಶ್ವರ -ಕನ್ನಿಕಾ ಪರಮೇಶ್ವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ” ಯೋಜನೆಯಡಿ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ನಗರ ನಿವಾಸಿ ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಣಾ ಕಾರ್ಯಕ್ರಮ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜುಲೈ 28ರ ಭಾನುವಾರ ಮಧ್ಯಾಹ್ನ 3:30ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿದೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಉದ್ಘಾಟನೆ ಮಾಡಲಿದ್ದು,ಕಾರ್ಯಕ್ರಮದಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕನ್ನಿಕಾ ಪರಮೇಶ್ವರ್ ಅವರು ಉಪಸ್ಥಿತಲಿರಲಿದ್ದಾರೆ, ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ವಹಿಸಲಿದ್ದು, ಶಾಸಕರಾದ ಜಿಬಿ ಜ್ಯೋತಿಗಣೇಶ್ ಅವರು ನಗರ ಪತ್ರಕರ್ತರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ. ಮಲ್ಲಿಕಾರ್ಜುನಯ್ಯ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ್ ಎಂ ಗೌಡ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿವಿ ಅಶ್ವಿಜಾ, ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ ರಘುರಾಮ್ ತಿಳಿಸಿದ್ದಾರೆ.

ಪ್ರತಿಭಾ ಪುರಸ್ಕಾರದ ಬಗ್ಗೆ ಅಧ್ಯಕ್ಷರಾದ ಚಿ.ನಿ. ಪುರುಷೋತ್ತಮ್ ಮಾತನಾಡಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಅವರ ಆಶಯದಂತೆ ಜಿ ಪರಮೇಶ್ವರ್ ಹಾಗೂ ಶ್ರೀಮತಿ ಕನ್ನಿಕಾ ಪರಮೇಶ್ವರ್ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ಧನ ದತ್ತಿನಿಧಿಯಡಿ ಎಸ್ ಎಸ್ ಎಲ್ ಸಿ , ಪಿಯುಸಿಯಲ್ಲಿ ಶೇಕಡ 98%, 99%ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಒಂದು ಲಕ್ಷ ಪ್ರೋತ್ಸಾಹ ಧನ, 8, 9 ತರಗತಿ ಸೇರಿದಂತೆ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷವಾದ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇಂಜಿನಿಯರಿAಗ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಅಂಕಿತ ಎಂಬುವವರಿಗೂ ವಿಶೇಷ ಪ್ರತಿಭಾ ಪುರಸ್ಕಾರವನ್ನು ಕೊಡ ಮಾಡುತ್ತಿದ್ದು ವಿಶೇಷವಾಗಿ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ತುಮಕೂರು ನಗರ ಪತ್ರಕರ್ತರುಗಳಿಗೆ ಉಚಿತ ಆರೋಗ್ಯ ವಿಮೆ ಕಾರ್ಡ್ ಕೊಡ ನೀಡಲಾಗಿತ್ತಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *