ಕೆ.ಎನ್.ರಾಜಣ್ಣ ಸಚಿವ ಸ್ಥಾನದಿಂದ ವಜಾ

ತುಮಕೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಿಂದ ವಜಾಗೊಳಿಸಿರುವುದಾಗಿ ರಾಜ್ಯಪಾಲರಿಂದ ಮುಖ್ಯಕಾರ್ಯದರ್ಶಿಗಳಿಗೆ ಬಂದಿರುವ ಪತ್ರದಿಂದ ತಿಳಿದು ಬಂದಿದೆ.

ಈ ಮೊದಲು ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎನ್.ರಾಜಣ್ಣನವರನ್ನು ಸಂಪುಟದಿಂದ ಕೈ ಬಿಡುವಂತೆ ಕಡಕ್ ಸಂದೇಶ ರವಾನೆಯಾದ ಕೂಡಲೇ ಮುಖ್ಯಮಂತ್ರಿಗಳು ರಾಜಣ್ಣನವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.

ಕೆ.ಎನ್.ರಾಜಣ್ಣನವರು ರಾಜೀನಾಮೆ ನೀಡಲು ನಾನೇನು ಮಾಡಿದ್ದೇನೆ, ಕೊಡುವುದಿಲ್ಲ ಎಂದಿದ್ದಾರೆ, ಇದರಿಂದ ಸಿದ್ದರಾಮಯ್ಯನವರು ಸಿಟ್ಟಾದರೆನ್ನಲಾಗಿದ್ದು, ರಾಜ್ಯಪಾಲರಿಗೆ ಸಹಕಾರಿ ಸಚಿವ ರಾಜಣ್ಣನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ತೆಗೆಯಬೇಕೆಂದು ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆ.ಎನ್.ರಾಜಣ್ಣನವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದಾಗಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ರಾಜ್ಯಪಾಲರಿಂದ ಪತ್ರ ರವಾನೆಯಾಗಿದೆ.

ಇತ್ತೀಚೆಗೆ ಕೆ.ಎನ್.ರಾಜಣ್ಣ ಅವರು ಮತಗಳ್ಳತನದ ಬಗ್ಗೆ ಮಾತನಾಡುತ್ತಾ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನಮ್ಮದೇ ಸರ್ಕಾರ ಇತ್ತು ಆಗ ಏನು ಮಾಡುತ್ತಿದ್ದರು ಎಂದು ಮಾತನಾಡಿದ್ದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ದೇಸದ್ಯಾಂತ ಹೋರಾಟ ರೂಪಿಸುತ್ತಿರುವ ಕಾಳದಲ್ಲೇ, ರಾಜಣ್ಣವರ ಈ ಹೇಳಿಕೆ ಪಕ್ಷ ಮತ್ತು ರಾಹುಲ್ ಗಾಂಧಿಯವರಿಗೆ ಮಜಗರವನ್ನುಂಟು ಮಾಡಿತ್ತು.

ಈ ಹಿನ್ನಲೆಯಲ್ಲಿ ಹೈಕಮಾಂಡ್ ಕೆ.ಎನ್.ರಾಜಣ್ಣನವರ ರಾಜೀನಾಮೆ ಕೂಡಲೇ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಟುವಾಗಿ ಹೇಳಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ಕೆ.ಎನ್.ರಾಜಣ್ಣ ಅವರನ್ನು ಸಫುಟದಿಂದ ವಜಾಗೊಳಿಸಲಾಗಿದೆ.

ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರಾಜಣ್ಣನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಪತ್ರ ರವಾನೆ ಮಾಡುತ್ತಿರುವುದನ್ನು ತಿಳಿದ ರಾಜಣ್ಣನವರು ತಮ್ಮ ಮಗ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮೂಲಕ ರಾಜೀನಾಮೆ ಪತ್ರ ಕಳಿಸಿದಾಗ ಸಿದ್ದರಾಮಯ್ಯನವರು ರಾಜ್ಯಪಾಲರಿಗೆ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಪತ್ರ ರವಾನೆ ಮಾಡಲಾಗಿದೆ ಎಂದು ಅಸಮದಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

Leave a Reply

Your email address will not be published. Required fields are marked *