ತುಮಕೂರು : ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೂನ್ 3ರಂದು ದೈವಾರ್ಷಿಕ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ (Helpline) ಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲೆಯ ಆಗ್ನೇಯ ಶಿಕ್ಷಕರ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮತದಾರರಿಗೆ ಚುನಾವಣೆಗೆ ಸಂಬಂಧಿಸಿದ ದೂರು-ಸಲಹೆ-ಸೂಚನೆಗಳಿದ್ದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ: 080-22109665 ಹಾಗೂ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ: 0816-2273595ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.