ತುಮಕೂರು : ಕಿತ್ತೂರು ರಾಣಿ ಚೆನ್ನಮ್ಮಾಜಿ ಅವರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿಯು ಇಂದಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿಂದು ಕಿತ್ತೂರು ಉತ್ಸವ-2024ರ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕಿತ್ತೂರು ಚೆನ್ನಮ್ಮಾಜಿಯವರ ವಿಜಯ ಜ್ಯೋತಿ ಯಾತ್ರೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥವಾಗಿ ಮುಖ್ಯಮಂತ್ರಿಗಳು ಅಕ್ಟೋಬರ್ 2ರಂದು ಈ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ಚಿಕ್ಕಮಗಳೂರಿನಿಂದ ಜಿಲ್ಲೆಗೆ ತಲುಪಿದ್ದು, ಜಿಲ್ಲೆಯಿಂದ ದಾಬಸ್‍ಪೇಟೆ ಮಾರ್ಗವಾಗಿ ಬೆಂಗಳೂರು ಉತ್ತರ ಜಿಲ್ಲೆಗೆ ಬೀಳ್ಕೊಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ: ಕೆ. ಸಣ್ಣ ಹೊನ್ನಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ವಿಜಯ ಜ್ಯೋತಿ ಯಾತ್ರೆಯ ಸಂಪರ್ಕ ಅಧಿಕಾರಿ ವೀರೇಶ್ ಅಶ್ವಿ ಸೇರಿದಂತೆ ಸಿಬ್ಬಂದಿ ವರ್ಗ, ಮತ್ತಿತರರು ಪಾಲ್ಗೊಂಡಿದ್ದರು.