ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ (ಜು.8) ನಡೆದ 18ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹೋರಾಟಗಾರರಾದ ಕೊಟ್ಟ ಶಂಕರ್ ಮತ್ತು ಭಗತ್ ಸಿಂಗ್ ಕುಂದೂರು ಅವರಿಗೆ ಪಿಎಚ್.ಡಿ. ಪದವಿ ಪ್ರಮಾಣಪತ್ರ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಿದರು.
ಕೊಟ್ಟ ಶಂಕರ್ ಅವರು ತುಮಕೂರು ವಿವಿ ಇತಿಹಾಸ ಮತ್ತು ಪುರಾತತ್ವ ವಿಭಾಗದಲ್ಲಿ ಡಾ ಚಿಕ್ಕಣ್ಣ ಅವರ ಮಾರ್ಗದರ್ಶನದಲ್ಲಿ ತುಮಕೂರು ಜಿಲ್ಲೆಯ ದಲಿತ ಚಳವಳಿಯ ಚಾರಿತ್ರಿಕ ಅಧ್ಯಯನ ಎಂಬ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಟ್ಟ ಶಂಕರ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ ಮಾಡಲಾಯಿತು.

ಭಗತ್ ಸಿಂಗ್ ಕುಂದೂರು ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ವಿರೋಧಿ ಕಾಯ್ದೆಯ ಸಮಾಜ ಶಾಸ್ತ್ರೀಯ ಅಧ್ಯಯನ (ವಿಶೇಷವಾಗಿ ತುಮಕೂರು ಜಿಲ್ಲೆಯನ್ನು ಅನುಲಕ್ಷಿಸಿದಂತೆ) ಎಂಬ ಮಹಾಪ್ರಬಂಧವನ್ನು ತುಮಕೂರು ವಿವಿಗೆ ಸಲ್ಲಿಸಿದ್ದರು. ಇದಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.