ಕೆಪಿಎಸ್‍ಸಿ ಪರೀಕ್ಷೆ : ಲೋಪದೋಷವಾಗದಂತೆ ನಡೆಸಲು ಡಿಸಿ ಕಟ್ಟುನಿಟ್ಟಿನ ಸೂಚನೆ

ತುಮಕೂರು : ನಗರದ 16 ಕೇಂದ್ರಗಳಲ್ಲಿ ಆಗಸ್ಟ್ 27ರಂದು ಕೆಪಿಎಸ್‍ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಕೆಪಿಎಸ್ಸಿ ಪರೀಕ್ಷೆ ಪೂರ್ವ ಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಸುಸ್ಥಿತಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿಗಳು ಇಂದೇ ಭೇಟಿ ನೀಡಿ ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್‍ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಹಾಗೂ ಪ್ರಶ್ನೆ ಪತ್ರಿಕೆಯನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಪರಿಕ್ಷಾರ್ಥಿಗಳಿಗೆ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಆಗಸ್ಟ್ 27ರಂದು ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಮಪ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಾರಾಯಣಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಡಿಡಿಪಿಐ ಕೆ. ಮಂಜುನಾಥ್, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *