
ತುಮಕೂರು : ಪಕ್ಷದ ಅಧ್ಯಕ್ಷರು ಮತ್ತು ನಾಯಕರೊಂದಿಗೆ ಚರ್ಚಿಸದೆ ಬಿಜೆಪಿಯೊಂದಿಗೆ ಮೈತ್ರಿ ಒಪ್ಪಂದ ಮಾಡಿಕೊಂಡಿರುವುದರಿಂದ ಜೆಡಿಎಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‍ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಉಚ್ಛಾಟಿಸಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿ.ಎಂ.ಇಬ್ರಾಹಿಂ ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದ್ದು, ನಮ್ಮ ಪಕ್ಷದಲ್ಲಿ ಎಲ್ಲಾ ಜಾತಿ, ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‍ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿರುವುದರಿಂದ ಈ ತತ್ ಕ್ಷಣದಿಂದ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್‍ಕುಮಾರಸ್ವಾಮಿಅವರನ್ನು ಪಕ್ಷದಿಂದ ಉಚ್ಛಾಟಿಸಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.