ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರು ಚಿಕ್ಕ ನಾರವಂಗಲ ಗ್ರಾಮದ ಕೆರೆ ಕೋಡಿಯಿಂದ ದೊಡ್ಡ ನಾರವಂಗಲ ಕೆರೆ ಕೋಡಿಯವರೆಗೂ ಸಿಸಿ ರಸ್ತೆ ಸಿಸಿ ಚರಂಡಿ ಅಭಿವೃದ್ಧಿ ಕಾಮಗಾರಿ,ಚಿಕ್ಕನಾರವಂಗಲ ಗ್ರಾಮದ ರಸ್ತೆಯಿಂದ ಎಂ. ಎಂ. ಕಾವಲ್ ಗುಬ್ಬಿ ತಾಲೂಕು ತುಮಕೂರು ಜಿಲ್ಲೆಯ ಮುಖ್ಯ ರಸ್ತೆವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ದೊಡ್ಡ ನಾರವಂಗಲ ಗ್ರಾಮದ ಸಿ.ಸಿ. ರಸ್ತೆ ಸಿ.ಸಿ. ಚರಂಡಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿ,ಮಲ್ಲಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಸಂದ್ರ ಸಿರಿವಾರ ಮುಖ್ಯರಸ್ತೆಯ ಹಬ್ಬತ್ತನಹಳ್ಳಿ ಮುಖ್ಯ ದ್ವಾರದಿಂದ ಹಬ್ಬತ್ತನಹಳ್ಳಿ ಹಾಗೂ ಜೋಗಿ ಹಟ್ಟಿ ಮಾರ್ಗ ರಾಜ್ಯ ಹೆದ್ದಾರಿ 206 ಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ, ಮಲ್ಲಸಂದ್ರ ಸಿರಿವಾರ ಮುಖ್ಯರಸ್ತೆಯ ಹಬ್ಬತ್ತನಹಳ್ಳಿ ಗ್ರಾಮದ ನವಗ್ರಾಮ ಎಸ್‍ಸಿ ಕಾಲೋನಿಯಿಂದ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ನಿರ್ಮಾಣ ಕಾಮಗಾರಿ, ಹಬ್ಬತ್ತನಹಳ್ಳಿ ಗ್ರಾಮದಲ್ಲಿ ಮನೆಮನೆಗೆ ನಲ್ಲಿ ಸಂಪರ್ಕ ಕಾಮಗಾರಿ, ಕೊಟ್ಟನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನರಗನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಿ, ವಿದ್ಯಾಭ್ಯಾಸ, ಆರೋಗ್ಯ, ಮದುವೆ ಹಾಗೂ ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಶೀಟ್ ಸಿಮೆಂಟ್ ಸೇರಿದಂತೆ ಇನ್ನಿತರ ಸಮಸ್ಯೆ ಉಳ್ಳವರಿಗೆ ಸುಮಾರು ಮೂರು ಲಕ್ಷಕ್ಕೂ ಹೆಚ್ಚಿನ ಧನಸಹಾಯ ಮಾಡಿದರು.

ಸುಮಾರು 8 ಕೋಟಿ (ಎಂಟು ಕೋಟಿ) ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಚಾಲನೆ ನೀಡಿದ ಶಾಸಕರು, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹೆಗ್ಗೆರೆ ಜಿಲ್ಲಾ ಪಂಚಾಯತ್ ಜೆಡಿಎಸ್ ಉಸ್ತುವಾರಿಗಳಾದ ಹಾಲನೂರು ಅನಂತ್ ಕುಮಾರ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *