ತುಮಕೂರು : ಲಾರಿ ಮಾಲೀಕರ ವಿವಿಧ ಸಂಘಗಳು ಏಪ್ರಿಲ್ 14ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರದ ಅವಧಿಯಲ್ಲಿ ಜನ ಸಾಮಾನ್ಯರಿಗೆ ಹಾಲು, ವೈದ್ಯಕೀಯ ಆಕ್ಸಿಜನ್ ಸಿಲಿಂಡರ್, ಮತ್ತಿತರ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಮ್ ಅನ್ನು ಸ್ಥಾಪಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ. ಪ್ರಸಾದ್ ತಿಳಿಸಿದ್ದಾರೆ.
ಕಂಟ್ರೋಲ್ ರೂಮ್ ದಿನದ 24 ಗಂಟೆಯೂ ಕಾರ್ಯನಿರತದಲ್ಲಿರುತ್ತದೆ. ಅಗತ್ಯ ಸೇವೆಗಳ ಪೂರೈಕೆಯಲ್ಲಿ ತೊಂದರೆ ಉಂಟಾದರೆ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 0816-2278473ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.