ತುಮಕೂರು: ನಿರೀಕ್ಷಣಾ ಜಾಮೀನು ರದ್ದುಗೊಂಡಿದ್ದರಿಂದ ತಲೆ ಮರೆಸಿಕೊಳ್ಳಲು ಪರಾರಿಯಾಗುತ್ತಿದ್ದ ಶಾಸಕ ಮಾಡಾಳ್ ವಿರೂಪಾಕ್ಷ ಅವರನ್ನು ತುಮಕೂರು ಕ್ಯಾತ್ಸಂದ್ರ ಟೋಲ್‍ಗೇಟ್ ಬಳಿ ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ.
ಲಂಚ ಸ್ವೀಕಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‍ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾರಪ್ಪ ಅವರನ್ನು ಲೋಕಾಯುಕ್ತ ಪೆÇಲೀಸರು ಸೋಮವಾರ ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬೆಂಗಳೂರಿನ ಲೋಕಾಯುಕ್ತ ಪೆÇಲೀಸರು ಅವರನ್ನು ಬಂದಿಸಿ ಕರೆದುಕೊಂಡು ಹೋಗಿದ್ದಾರೆ.
ಮಾಡಾಳ್ ವಿರೂಪಾರಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಡಾಳ್ ವಿರುಪಾಕ್ಷಪ್ಪ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಆದರೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಲೋಕಾಯುಕ್ತ ಪೆÇಲೀಸರು ಕೋರ್ಟ್ ಮೊರೆ ಹೋಗಿದ್ದು, ಜಾಮೀನು ರದ್ದು ಮಾಡುವಂತೆ ಮನವಿ ಮಾಡಿದ್ದರು, ಇಂದು ನಿರೀಕ್ಷಣಾ ಜಾಮೀನು ರದ್ದುಗೊಂಡಿತ್ತು. ಜಾಮೀನು ರದ್ದಾದ ಶಾಸಕ ಮಾಡಾಳ್ ವಿರೂಪಾಕ್ಷ ಅವರನ್ನು ಬಂಧಿಸಲಾಗಿದೆ.
ಶಾಸಕ ಮಾಡಾಳ್ ಚಿತ್ರದುರ್ಗದಿಂದ ಬೆಂಗಳೂರಿನತ್ತ ಕೆಎ 17 ಝಡ್ 7929 ನಂಬರಿನ ಬಿಳಿ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.