ಕೊರಟಗೆರೆ : ಮಾ. 5,”ರಾಜೀವ್ ಭವನ” ಉದ್ಘಾಟನೆ

ಕೊರಟಗೆರೆ : ಮಾರ್ಚ್ 5ರ ಭಾನುವಾರದಂದು ಕೊರಟಗೆರೆ ಪಟ್ಟಣದಲ್ಲಿ ನೂತನ ಕಾಂಗ್ರೆಸ್(ರಾಜೀವ್ ಭವನ) ಭವನ ಉದ್ಘಾಟನೆ ಮತ್ತು ಜಿಲ್ಲಾ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೋಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

Advertisement

ಪಟ್ಟಣದ ನೂತನ ಕಾಂಗ್ರೆಸ್ ಭವನವನ್ನುರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನನಿರ್ಗೆರವರು ಉದ್ಘಾಟಿಸುವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಎ.ಐ.ಸಿ.ಸಿ ವೀಕ್ತಲಾದ ಸುರ್ಜೆವಾಲ, ರಾಜ್ಯ ಪ್ರಚಾರಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಸಲೀಂಅಹಮದ್, ಸೇರಿದಂತೆ ರಾಜ್ಯ ನಾಯಕರುಗಳು ಹಾಗೂ ಪಕ್ಷದ ಜಿಲ್ಲೆಯ ಎಲ್ಲಾ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisement

ಸುಮಾರು ಈ ಸಮಾವೇಶಕ್ಕೆ 50 ಸಾವಿರ ಜನರು ಸೇರುವ ನಿರೀಕ್ಷೆ ಇದ್ದು ಕಾರ್ಯಕ್ರಮವನ್ನು ಭವನ ಮುಂಭಾಗದ ಜಾಗದಲ್ಲಿ ನಡೆಸಲಾಗುವುದು, ಸುಮಾರು 150 ಕೋಟಿ ರೂ.ನಲ್ಲಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಕಾಂಗ್ರೆಸ್ ಪಕ್ಷದ ಅಸ್ತಿಯಾಗಿದ್ದು ಈ ಕಟ್ಟಡ ನಿರ್ಮಾಣಕ್ಕೆ ಹಲವಾರು ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ಭವನ ನಿರ್ಮಾಣಕ್ಕೆ ನಿವೇಷನವನ್ನು ಉಚಿತವಾಗಿ ಧಾನ ಮಾಡಿರುವ ಪಟ್ಟಣದ ಉದ್ಯಮಿ ಹೆಚ್.ಮಹದೇವರವರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದ ತಿಳಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *