ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ ಮಾರ್ಚ್ 5, 2023ರಂದು ಮಧ್ಯಾಹ್ನ 1.30 ಗಂಟೆಗೆ ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ಅನುದಾನದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ.

ADVERTISEMENT
ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವರಾದ ಬಿ. ಬಸವರಾಜು(ಭೈರತಿ), ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಕಂದಾಯ ಸಚಿವರಾದ ಆರ್. ಅಶೋಕ್, ಶಾಲಾ ಶಿಕ್ಷಣ ಸಾಕ್ಷರತಾ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ: ಕೆ. ಸುಧಾಕರ್, ಯುವ ಸಬಲೀಕರಣ ಕ್ರೀಡಾ ಮತ್ತು ರೇಷ್ಮೆ ಸಚಿವರಾದ ಡಾ: ಕೆ.ಸಿ.ನಾರಾಯಣಗೌಡ, ತೋಟಗಾರಿಕೆ ಸಚಿವರಾದ ಎಂ. ಮುನಿರತ್ನ, ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕರಾದ ಡಾ: ವೈ.ಎ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ಸ್ಟೇಟ್ ಮಿನರಲ್ಸ್ ಕಾಪೋರೇಷನ್ ಲಿಮಿಟೆಡ್ ಅಧ್ಯಕ್ಷರಾದ ಜಯರಾಮ್ ಎ.ಎಸ್. ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅವರು ಅಧ್ಯಕ್ಷತೆವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಜಿ.ಎಸ್.ಬಸವರಾಜು, ಜಗ್ಗೇಶ್, ಡಿ.ಕೆ.ಸುರೇಶ್ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ. ಸಿಇಓ ಡಾ: ಕೆ. ವಿದ್ಯಾಕುಮಾರಿ, ತುಮಕೂರು ಪಾಲಿಕೆ ಆಯುಕ್ತರಾದ ದರ್ಶನ್ ಹೆಚ್.ವಿ., ಪೊಲೀಸ್ ಅಧೀಕ್ಷಕರಾದ ರಾಹುಲ್ ಕುಮಾರ್ ಶಹಪೂರ್‍ವಾಡ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಫಲ-ಪುಷ್ಪ ಪ್ರದರ್ಶನ :
ತೋಟಗಾರಿಕೆ ಇಲಾಖೆ, ತುಮಕೂರು ಜಿಲ್ಲಾಡಳಿತ, ತುಮಕೂರು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 2022-23ನೇ ಸಾಲಿನ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಈ ಫಲ-ಪುಷ್ಪ ಪ್ರದರ್ಶನವು ಮಾರ್ಚ್ 5, 2023 ರಿಂದ ಮಾ.7ರವರೆಗೆ ನಡೆಯಲಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ಮಾರ್ಚ್ 5ರಂದು ಮಧ್ಯಾಹ್ನ 1.30ಕ್ಕೆ ಉದ್ಘಾಟಿಸುವರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ, ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಶಾಲಾ ಶಿಕ್ಷಣ ಸಾಕ್ಷರತಾ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅವರು ಅಧ್ಯಕ್ಷತೆವಹಿಸುವರು.
ತೋಟಗಾರಿಕೆ ಸಚಿವರಾದ ಮುನಿರತ್ನ ಅವರು ತಾಂತ್ರಿಕ ಕಿರುಹೊತ್ತಿಗೆ ಬಿಡುಗಡೆ ಮಾಡುವರು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಟ್ಟಡಗಳ ಉದ್ಘಾಟನೆ :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ ಮತ್ತು ಉಪ್ಪಾರಹಳ್ಳಿ ಸಾಮಾನ್ಯ ಸೇವಾ ಕೇಂದ್ರ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಗುಂಚಿಚೌಕ, ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಉದ್ಘಾಟಿಸುವರು.