ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಮಾರ್ಚ್ 19ರಂದು ಜಿಲ್ಲಾ ಮಟ್ಟದ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಸ್ವೀಪ್ ಕಾರ್ಯಕ್ರಮದ ಪ್ರಯುಕ್ತ ತುಮಕೂರು ವಿಶ್ವವಿದ್ಯಾನಿಲಯದಿಂದ ಭದ್ರಮ್ಮ ಛತ್ರದ ಮೂಲಕ ಜಿಲ್ಲಾ ಕೇಂದ್ರ ಗ್ರಂಥಾಲಯದವರೆಗೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ಶಾಲಾ ಮಕ್ಕಳಿಂದ ಮತದಾನ ಜಾಗೃತಿ ಕುರಿತು ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಾಥಾ ಕಾರ್ಯಕ್ರಮದ ನಂತರ ಗ್ರಂಥಾಲಯದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿU ಜಿ.ಪ್ರಭು, ಜಿಲ್ಲಾ ಮಟ್ಟದ- ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು, ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.