ತುಮಕೂರು: ಗಣಿತಶಾಸ್ತ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಲು ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ವಿವಿಯ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಪಾಟೀಲ್ ಮಲ್ಲಿಕಾರ್ಜುನ್ ಬಿ. ಹೇಳಿದರು.
ವಿವಿ ಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿ, ಗಣಿತಶಾಸ್ತ್ರದ ಮಹತ್ವ, ಇತಿಹಾಸ, ಅವಕಾಶಗಳ ಕುರಿತು ತಿಳಿಸಿದರು.
ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಸಹ ಪ್ರಾಧ್ಯಾಪಕಿ ಡಾ. ಸಿ. ಶೋಭಾ ಉಪಸ್ಥಿತರಿದ್ದರು.