ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಕುಂಚಿಟಿಗ ಸಮುದಾಯದ ಪ್ರಮುಖ ಮುಖಂಡರ ಸಭೆಯನ್ನು ಏ.17 ರಂದು ಬುಧವಾರ ಮಧ್ಯಾಹ್ನ 3.00 ಗಂಟೆಗೆ ನಗರದ ಕೋತಿ ತೋಪಿನಲ್ಲಿರುವ ‘ಕುಂಚಶ್ರಿ ಪ್ಯಾಲೆಸ್” ( ಸಮುದಾಯ ಭವನದ ಮೇಲ್ಬಾಗದಲ್ಲಿರುವ ಪಾರ್ಟಿ ಹಾಲ್)ನಲ್ಲಿ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ಕುಂಚಿಟಿಗ ಸಮಾಜದ ಸಾಧಕ ಭಾದಕಗಳ ಬಗ್ಗೆ ಚರ್ಚೆ ಹಾಗೂ 2024ನೇ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಮುಖ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಸಮಾಜದ ನಾಯಕರಾದ ಟಿ.ಬಿ.ಜಯಚಂದ್ರ ಈ ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ,ಮಾಜಿ ಎಂಎಲ್‍ಸಿ ಬೆಮಲ್ ಕಾಂತರಾಜು, ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಭಾಗವಹಿಸಲಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳ ಕುಂಚಿಟಿಗ ಸಮುದಾಯದ ಪ್ರಮುಖ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕುಂಚಿಟಿಗ ಸಮುದಾಯದ ಸ್ವಾಗತ ಸಮಿತಿ ತಿಳಿಸಿದೆ.