ಜ.29ರಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ

ತುಮಕೂರು : ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಹಾರಗಳಿಂದಾಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಹಾಗೂ ಸಾರ್ವಜನಿಕರಿಂದ ಬರುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಜನವರಿ 29ರಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರುಗಳ ಸಭೆ ಕರೆಯಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್ ಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳು-ಹಗರಣಗಳ ಸಂಬಂಧವಾಗಿ ಚರ್ಚಿಸುವ ಸಂಬಂಧವಾಗಿ ನಿಗದಿಪಡಿಸಿದ್ದು, ಸದರಿ ಸಭೆಗೆ ತುಮಕೂರು ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರುಗಳು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗುವಂತೆ ಸೂಚಿಸಿದೆ.

Leave a Reply

Your email address will not be published. Required fields are marked *