ತುಮಕೂರು ಗ್ರಾಮಾಂತರ : ಇಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಗೃಹ ಕಛೇರಿ ಬಳ್ಳಗೆರೆಯಲ್ಲಿ ನಡೆದ ಜನತಾ ದರ್ಶನಕ್ಕೆ ಮಹಿಳೆಯರೆ ಹೆಚ್ಚು ಬಂದಿದ್ದರು.
ಶಾಸಕರಾಗಿ ಆಯ್ಕೆ ಆದಾಗಿನಿಂದಲೂ ವಾರಕ್ಕೊಮ್ಮೆ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸಾವಿರಾರು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸುವುದರ ಜೊತೆಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ಆರೋಗ್ಯ, ಮದುವೆ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮನೆ ಕಟ್ಟಿಕೊಳ್ಳಲು ಶೀಟ್ ಸಿಮೆಂಟ್ ಸೇರಿದಂತೆ ಇನ್ನಿತರ ಸಮಸ್ಯೆ ಉಳ್ಳವರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು.