
ನವದೆಹಲಿ : ಎನ್‍ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ನಿರ್ಗಮಿತ ಪ್ರಧಾನಿ ನರೇಂದ್ರ ಮೋದಿ ದೆಹಲಿ ನಿವಾಸದಲ್ಲಿ ನಡೆದ ಎನ್‍ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ನರೇಂದ್ರ ಮೋದಿಯನ್ನು ತಮ್ಮ ನಾಯಕನೆಂದು ಒಪ್ಪಿಕೊಂಡು ಪ್ರಧಾನಿ ಮಾಡಲು ದೆಹಲಿಯಲ್ಲಿ ಎನ್‍ಡಿಎ ನಾಯಕರು ಈ ಪ್ರಸ್ತಾವನೆಯನ್ನು ಅಂಗೀಕರಿಸಿದ್ದಾರೆ.
ಜೂನ್ 7 ರಂದು ಎನ್‍ಡಿಎ ಸಂಸದರೊಂದಿಗೆ ಸಭೆ ನಡೆಸಿದ ನಂತರ ಎಲ್ಲ ಮಿತ್ರಪಕ್ಷಗಳ ಜೊತೆಗೂಡಿ ರಾಷ್ಟ್ರಪತಿ ಅವರನ್ನು ಭೇಟಿಯಾಲಿದ್ದಾರೆ. ಶುಕ್ರವಾರ ಸಂಜೆ 5 ರಿಂದ 7 ಗಂಟೆ ಮಧ್ಯೆ ಭೇಟಿಗೆ ಸಮಯ ನಿಗದಿಪಡಿಸಲಾಗಿದೆ.
ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಎಲ್‍ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್, ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಮೋದಿ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಎನ್‍ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಭೆಗೆ ಹಾಜರಿರಲಿಲ್ಲ.
ಬಹುತೇಕ ನರೇಂದ್ರ ಮೋದಿಯವರು 18ನೇ ಲೋಕಸಭೆಯ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 8ರ ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಈ ಸಂದರ್ಭದಲ್ಲಿಯೇ ಕೇಂದ್ರ ಮಂತ್ರಿ ಮಂಡಲವೂ ರಚನೆಯಾಗುವ ಸಂಭವವಿದ್ದು ಕರ್ನಾಟಕದ ಮೂವರಿಗೆ ಮಂತ್ರಿ ಭಾಗ್ಯ ಸಿಗಬಹುದು ಎಂದು ಹೇಳಲಾಗುತ್ತಿದೆ.