ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ತಾಲೂಕಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ ಕೊಡಬೇಕಿತ್ತು.
ಆದರೆ ಸ್ಪೀಕರ್ ಇರಲಿಲ್ಲ. ಹಾಗಾಗಿ ಸೋಮವಾರ ರಾಜೀನಾಮೆ ಕೊಡುತ್ತೇನೆ ಎಂದರು. ಸಧ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ. ಇನ್ನು ಬೇರೆ ಶಾಸಕರ ರಾಜಿನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.